ಹಾಸನ: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಕಿಂಗ್ ಪಿನ್ ಗಳ ಬಂಧನದ ಬಳಿಕ, ಮತ್ತಷ್ಟು ಪ್ರಕರಣದಲ್ಲಿ ಭಾಗಿಯಾದವರ ಹೆಸರುಗಳು ಹೊರ ಬೀಳುತ್ತಿವೆ. ಈ ಪ್ರಕರಣದಲ್ಲಿ ಇದೀಗ ಗ್ರಾಮ ಪಂಚಾಯ್ತಿ ಅಧ್ಯಕ್ಷರೊಬ್ಬರನ್ನು ಸಿಐಡಿ ಬಂಧಿಸಿದೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬೆಕ್ಕ ಗ್ರಾಮದ ಗ್ರಾಮ ಪಂಚಾಯ್ತಿ ಅಧ್ಯಕ್ಷ ಕೇಶವಮೂರ್ತಿಯನ್ನು ಸಿಐಡಿ ಪೊಲೀಸರು ಇಂದು ಬಂಧಿಸಿದ್ದಾರೆ. ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಇವರು ಭಾಗಿಯಾಗಿದ್ದಾರೆ ಎನ್ನುವಂತ ಆರೋಪದಲ್ಲಿ ಅವರನ್ನು ಬಂಧಿಸಲಾಗಿದೆ.
ಬೆಕ್ಕ ಗ್ರಾಮದ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿರುವಂತ ಅವರನ್ನು ಬಂಧಿಸಿರುವಂತ ಸಿಐಡಿ, ಹೆಚ್ಚಿನ ವಿಚಾರಣೆ ನಡೆಸೋದಕ್ಕಾಗಿ ಬೆಂಗಳೂರಿಗೆ ಕರೆದೊಯ್ಯುತ್ತಿದೆ ಎಂದು ತಿಳಿದು ಬಂದಿದೆ.




