ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆ ಮೂಲಕ ಜಾರಿಗೆ, ಸಚಿವ ಸಂಪುಟ ಸಭೆ ಸಮ್ಮತಿ

ಬೆಂಗಳೂರು: ಇಂದು ಬೆಳಿಗ್ಗೆ ಸಿಎಂ ಬೊಮ್ಮಾಯಿಯವರು ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಜಾರಿಗೆ ತರಲಾಗುತ್ತದೆ ಎಂಬುದಾಗಿ ಘೋಷಣೆ ಮಾಡಿದ್ದರು. ಅದರಂತೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ, ಈ ಕಾಯ್ದೆಗೆ ಒಪ್ಪಿಗೆ ಕೂಡ ನೀಡಲಾಗಿದೆ.

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವಂತ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಈ ಕಡತಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. ಹೀಗಾಗಿ ರಾಜ್ಯದಲ್ಲಿ ಶೀಘ್ರವೇ ಮತಾಂತರ ನಿಷೇಧ ಕಾಯ್ದೆ ಜಾರಿಗೊಳ್ಳಲಿದೆ.

About The Author