ಮಡಿಕೇರಿ: ಮೇ ಮೂರನೇ ವಾರದಲ್ಲಿ ಪ್ರಕಟಗೊಳ್ಳಲಿದೆ ಎಂದು ಹೇಳಲಾಗುತ್ತಿತ್ತು. ಆದ್ರೇ.. ಆ ದಿನಾಂಕ ಕೂಡ ಈಗ ಘೋಷಣೆಯಾಗಿದೆ. ಮೇ.19ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂಬುದಾಗಿ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಳೆದ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ನಡೆದಿದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯ ಮಾಪನ ಮುಕ್ತಾಯದ ಹಂತಕ್ಕೆ ತಲುಪಿದೆ. ಮೇ.19ರಂದು ಫಲಿತಾಂಶವನ್ನು ಘೋಷಣೆ ಮಾಡಲಾಗುತ್ತದೆ ಎಂದರು.
ಅಂದಹಾಗೇ 3,440 ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 28 ರಿಂದ ಏಪ್ರಿಲ್ 11ರವರೆಗೆ ನಡೆದಿದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷೆಗೆ 8.76 ಲಕ್ಷ ವಿದ್ಯಾರ್ಥಿಗಳು ನೋಂದಣಿಯಾಗಿದ್ದರು.




