ಡಿಪ್ಲೊಮಾ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್: ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರದ ವತಿಯಿಂದ 2022-23ನೇ ಸಾಲಿನ ಉದ್ಯೋಗಾರಿತ ಮತ್ತು 100% ಉದ್ಯೋಗ ಖಚಿತ ಡಿಪ್ಲೋಲಮಾ, ಪೋಸ್ಟ್ ಗ್ರ್ಯಾಜುಯೇಟ್ ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಕ್ಕೆ ಆನ್ಲೈನ್ /ಆಫ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ. ಸಂಸ್ಥೆಯು ದೇಶದ ಪಾಲಿಮರ್/ಪೆಟ್ರೋಕೆಮಿಕಲ್ಸ್/ ಪ್ಲಾಸ್ಟಿಕ್ಸ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡುತ್ತಿದೆ.

ಡಿಪ್ಲೋಲೀಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ(ಡಿಪಿಟಿ), ಡಿಪ್ಲೊಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ(ಡಿಪಿಎಂಟಿ)– 3 ವರ್ಷಗಳು & ಪೋಸ್ಟ್ ಗ್ರ್ಯಾಜುಯೇಟ್ ಡಿಪ್ಲೊಮಾ ಇನ್ ಪ್ಲಾಸ್ಟಿಕ್ಸ್ ಪೋರೀಸೆಸ್ಸಿಂಗ್ & ಟೆಸ್ಟಿಂಗ್(ಪಿಜಿಡಿ-ಪಿಪಿಟಿ)2 ವರ್ಷಗಳ ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸಬಹುದು.

ಎಸ್.ಎಸ್.ಎಲ್.ಸಿ, ಪಿ.ಯು.ಸಿ.(ವಿಜ್ಞಾನ) ಮತ್ತು ಬಿ.ಎಸ್.ಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರು/ಹಾಜರಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ದಿನಾಂಕ : 05.06.2022 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ https://cipet2022.onlineregistrationform.org/CIPET/ ಅಥವಾ
ದೂ: 0821-2510618/9480253024/9791431827/9466585669 ನ್ನು ಸಂಪರ್ಕಿಸಬಹುದೆಂದು ಸಿಪೆಟ್ ಸಂಸ್ಥೆಯ ನಿರ್ದೇಶಕರು ಮತ್ತು ಮುಖ್ಯಸ್ಥರಾದ ಆರ್.ಟಿ. ನಾಗರಳ್ಳಿ ತಿಳಿಸಿದ್ದಾರೆ.

About The Author