ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಅವರು ನಾಳೆ (ಮೇ 19) ಮಲ್ಲೇಶ್ವರದಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಮಧ್ಯಾಹ್ನ 12.30ಕ್ಕೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಿದ್ದಾರೆ.
ಮಧ್ಯಾಹ್ನ 1 ಗಂಟೆ ನಂತರ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು https://karresults.nic.in/ ಈ ಜಾಲತಾಣಕ್ಕೆ ಭೇಟಿ ನೀಡಿ, ತಮ್ಮ ನೊಂದಣಿ ಸಂಖ್ಯೆ ನಮೂದಿಸಿ, ಫಲಿತಾಂಶ ವೀಕ್ಷಿಸಬಹುದಾಗಿದೆ. ಅಲ್ಲದೇ ನಾಳೆ ಮಧ್ಯಾಹ್ನ ಆಯಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ.
ಇದಷ್ಟೇ ಅಲ್ಲದೇ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್ಗಳಿಗೆ ಎಸ್ಎಂಎಸ್ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ.




