ಬೆಂಗಳೂರು: 2021-22ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಶೇ.90.29ರಷ್ಟು ವಿದ್ಯಾರ್ಥಿನಿಯರು ಪರೀಕ್ಷೆಯಲ್ಲಿ ಪಾಸ್ ಆಗುವ ಮೂಲಕ, ಈ ಬಾರಿಯೂ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ಬಿಡುಗಡೆ ಮಾಡಿದಂತ ಪ್ರಾಥಮಿಕ ಮತ್ತ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.85.63ರಷ್ಟು ವಿದ್ಯಾರ್ಥಿಗಳು, ಶೇ.90.29ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಅಂದಹಾಗೇ, 8,53,436 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಅನುತ್ತೀರ್ಣರಾದಂತ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ- ಜೂನ್ 27, 2022ರಂದು ನಡೆಯಲಿದೆ.
SSLC ಫಲಿತಾಂಶ ಪ್ರಕಟ.
ಶೇ.85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ.
ಉತ್ತೀರ್ಣ ಪ್ರಮಾಣ:
ಬಾಲಕಿಯರು- ಶೇ. 90.29
ಬಾಲಕರು- ಶೇ. 81.30.8,53,436 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
7,30,881 ವಿದ್ಯಾರ್ಥಿಗಳು ಉತ್ತೀರ್ಣ.ಪೂರಕ ಪರೀಕ್ಷೆ- ಜೂನ್ 27, 2022.#sslcresults
— B.C Nagesh (@BCNagesh_bjp) May 19, 2022
ಎಸ್ಎಸ್ಎಲ್ಸಿ ಫಲಿತಾಂಶ ನೋಡಲು ಇಲಾಖೆಯ ಲಿಂಕ್ ಮೂಲಕ ನೋಡಬಹುದು.https://t.co/qP2v5VfYZa
— B.C Nagesh (@BCNagesh_bjp) May 19, 2022




