ಉಡುಪಿ : ಮೇಲ್ಮನೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆ ಇಂದು ಅಥವಾ ನಾಳೆ ಅಂತಿಮವಾಗಬೇಕಾಗಿದ್ದು, ನಾನು ಹಾಗೂ ಸಿದ್ದರಾಮಯ್ಯ ಅವರು ದೆಹಲಿಗೆ ಭೇಟಿ ನೀಡುತ್ತಿದ್ದೇವೆ. ಎಂದು ಡಿಕೆ ಶಿವಕುಮಾರ್ ತಿಳಿಸಿದ್ರು.
ಇಂದು ಬೆಳಗ್ಗೆ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಪಕ್ಷದ ಮುಖಂಡರ ಸಭೆ ಮಾಡಿದ್ದೇನೆ. ಉಡುಪಿ ವಿಧಾನಸಭಾ ಕ್ಷೇತ್ರದ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರನ್ನು ಅಭಿನಂದಿಸುತ್ತೇನೆ. ಪ್ರಮೋದ್ ಮಧ್ವರಾಜ್ ಅವರು ಪಕ್ಷ ತೊರೆದರೂ ಒಬ್ಬ ಕಾರ್ಯಕರ್ತರು ಕೂಡ ಅವರ ಜತೆ ಹೋಗದೆ ಪಕ್ಷದಲ್ಲೇ ಉಳಿದಿದ್ದಾರೆ. ಹೀಗಾಗಿ ಅವರಿಗೆಲ್ಲ ನಾನು ಹಾಗೂ ಪಕ್ಷ ಅಭಿನಂದನೆ ಸಲ್ಲಿಸುತ್ತೇವೆ. ನಾವು ಯಾರನ್ನು ಕಣಕ್ಕಿಳಿಸಬೇಕು ಎಂಬ ಜವಾಬ್ದಾರಿಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಉಪಾಧ್ಯಕ್ಷರಿಗೆ ವಹಿಸುತ್ತೇನೆ. ಅವರು ಚರ್ಚಿಸಿ ನನಗೆ ಹೆಸರುಗಳನ್ನು ಶಿಫಾರಸ್ಸು ಮಾಡುತ್ತಾರೆ. ನಾನು, ಶಾಸಕಾಂಗ ಪಕ್ಷದ ನಾಯಕರು ಹಾಗೂ ವರಿಷ್ಠರು ಕೂತು ಆದಷ್ಟು ಬೇಗ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ರು.