ಬೆಂಗಳೂರು: ಶಾಲಾ ಪಠ್ಯಪುಸ್ತಕರ ಪರಿಷ್ಕರಣೆ ಹಾಗೂ ಪರಿಷ್ಕರಣಾ ಸಮಿತಿಯ ಅಧ್ಯಕ್ಷರನ್ನಾಗಿ ರೋಹಿತ್ ಚರ್ಕತೀರ್ಥ ನೇಮಕ ವಿವಾದದ ಸ್ವರೂಪ ಪಡೆದಿದೆ. ನಾಡಗೀತೆ, ರಾಷ್ಟ್ರಕವಿ ಗೇಲಿ ಮಾಡಿದವನನ್ನು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷಸ್ಥಾನದಿಂದ ಕಿತ್ತಾಕುವಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವಂತ ವಿಪಕ್ಷ ನಾಯಕ ಸಿದ್ಧರಾಮಯ್ಯ, ನಾಡಗೀತೆಯನ್ನು ಅವಹೇಳನ ಮಾಡಿದ, ರಾಷ್ಟ್ರಕವಿಯನ್ನು ಗೇಲಿ ಮಾಡಿದ ಇಂತಹ ಒಬ್ಬ ಕಿಡಿಗೇಡಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ ಬಿಜೆಪಿ ಸರ್ಕಾರಕ್ಕೆ ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಬೇಕು ಎಂದು ಆಗ್ರಹಿಸಿದ್ದಾರೆ.
ನಾಡಗೀತೆಯನ್ನು ಅವಹೇಳನ ಮಾಡಿದ, ರಾಷ್ಟ್ರಕವಿಯನ್ನು
ಗೇಲಿ ಮಾಡಿದ
ಇಂತಹ ಒಬ್ಬ ಕಿಡಿಗೇಡಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ @BJP4Karnataka ಸರ್ಕಾರಕ್ಕೆ ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಬೇಕು. pic.twitter.com/RLGLIOhTLm— Siddaramaiah (@siddaramaiah) May 23, 2022




