ಸಮಾಜ ಕಲ್ಯಾಣ ಇಲಾಖೆಯಿಂದ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : 2022-23 ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಜಿಲ್ಲೆಯಲ್ಲಿ ಗುರುತಿಸಲಾಗಿರುವ ಪ್ರತಿಷ್ಟಿತ ಶಾಲೆಗಳ 6ನೇ ತರಗತಿಗೆ ದಾಖಲಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರುವ ಪ್ರತಿಭಾವಂತ ಪರಿಶಿಷ್ಟ ಜಾತಿ 35 ಸ್ಥಾನಗಳಿಗೆ 6ನೇ ತರಗತಿಗೆ ದಾಖಲಿಸಿಕೊಳ್ಳಲು ಮೇ 23 ರಿಂದ 31 ರವರೆಗೆ ಉಪನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರು(ಗ್ರೇಡ್-1&2) ಇವರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಇಲ್ಲಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಂದಿಗೆ ಇದೇ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಶಿವಮೊಗ್ಗ ಹಾಗೂ ತಾಲ್ಲೂಕಿನ ಎಲ್ಲ ಸಹಾಯಕ ನಿರ್ದೇಶಕ(ಗ್ರೇಡ್ 1&2) ರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ದೂ.ಸಂ: 08182-249241 ನ್ನು ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

About The Author