ಧಾರವಾಡ: ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದಂತ ಕ್ರೂಸರ್ ಚಾಲಕನ ನಿಯಂತ್ರಣ ತಪ್ಪಿ, ಮರಕ್ಕೆ ಬಾಡ ಬಳಿಯಲ್ಲಿ ಮೇ.20ರಂದು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿತ್ತು. ಈ ಪ್ರಕರಣದಲ್ಲಿ ನಿನ್ನೆ ಚಿಕಿತ್ಸೆ ಫಲಿಸದೇ ಬಾಲಕನೊಬ್ಬ ಸಾವನ್ನಪ್ಪಿದ್ದನು. ಈ ಬಳಿ ಇಂದು ಮತ್ತೋರ್ವ ಬಾಲಕಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಹೀಗಾಗಿ ಮೃತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಮೇ.20ರಂದು ಧಾರವಾಡದ ಬಾಡ ಬಳಿಯಲ್ಲಿ ನಡೆದಿದ್ದಂತ ಕ್ರೂಸರ್ ಮರಕ್ಕೆ ಡಿಕ್ಕಿಯಾದ ಪ್ರಕರಣದಲ್ಲಿ, ಸ್ಥಳದಲ್ಲೇ 9 ಮಂದಿ ಸಾವನ್ನಪ್ಪಿದ್ದರು. ಈ ಕ್ರೂಸರ್ ವಾಹನದಲ್ಲಿ 13 ಮಂದಿಯ ಮದುವೆ ದಿಬ್ಬಣವನ್ನು ಕರೆದೊಯ್ಯುತ್ತಿದ್ದ ವೇಳೆ ಅಪಘಾತ ಸಂಭವಿಸಿತ್ತು.
ಅಪಘಾತದ ಬಳಿಕ ತೀವ್ರವಾಗಿ ಗಾಯಗೊಂಡಿದ್ದಂತ ನಾಲ್ವರನ್ನು ಹುಬ್ಬಳ್ಳಿಯ ಕಿಮ್ಮ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ನಿನ್ನೆ ಬಾಲಕನೋರ್ವ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಇಂದು ಈ ಕ್ರೂಸರ್ ಅಪಘಾತದಲ್ಲಿ ಗಾಯಗೊಂಡು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ 5 ವರ್ಷದ ಬಾಲಕಿ ಆರಾಧ್ಯಾ ಹುತಮಲ್ಲಣ್ಣನವರ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಹೀಗಾಗಿ ಹುಬ್ಬಳ್ಳಿ ಅಪಘಾತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.




