BIG NEWS: ಸಚಿವ ಅಶ್ವತ್ಥನಾರಾಯಣ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ – ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಒತ್ತಾಯ

ಬೆಂಗಳೂರು: ಸಚಿವ ಅಶ್ವತ್ಥನಾರಾಯಣ ಅವರು, ಮಂಡ್ಯದಲ್ಲಿ ಪರಿಷತ್ ಚುನಾವಣಾ ನೀತಿ ಸಂಹಿತೆಯಿದ್ದರು, ಕಾಲೇಜುಗಳಲ್ಲಿ ಸಭೆ ಮಾಡಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಿರುವುದು ನಿಜ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇಂದು ತನ್ನ ಅಧಿಕಾರ ದುರ್ಬಳಕೆ ಮಾಡಿರುವ ಬಿಜೆಪಿ ಮಂತ್ರಿ ರಕ್ಷಣೆಗೆ ಮುಂದಾಗಿದೆ. ರಾಜ್ಯ ಹಾಗೂ ಕೇಂದ್ರ ಚುನಾವಣಾ ಆಯೋಗವಿದ್ದು, ರಾಜ್ಯ ಚುನಾವಣಾ ಆಯೋಗದ ಮುಖ್ಯಸ್ಥರು ಸಚಿವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂಬುದಾಗಿ ಕಾಂಗ್ರೆಸ್ ವಕ್ತಾರ ಹಾಗೂ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಒತ್ತಾಯಿಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ರಾಜ್ಯದಲ್ಲಿ ಎರಡು ಪಧವಿಧರರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ದಕ್ಷಿಣ ಪದವಿಧರರ ಕ್ಷೇತ್ರ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆ ಮಾಡುತ್ತಿದ್ದು, 12-05-2022ರಿಂದ ನೀತಿ ಸಂಹಿತೆ ಜಾರಿಯಲ್ಲಿದೆ. ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರು ಮಂಡ್ಯದ ನಾಲ್ಕೈದು ಕಾಲೇಜುಗಳಿಗೆ ಭೇಟಿ ನೀಡಿ ಸಭೆ ಮಾಡಿ ಬಿಜೆಪಿಗೆ ಮತ ನೀಡುವಂತೆ ಪ್ರಚೋದನೆ ಮಾಡಿದ್ದಾರೆ. ಈ ಸಂಬಂಧ ಮಂಡ್ಯ ಕಾಂಗ್ರೆಸ್ ನಾಯಕರು ದೂರು ನೀಡಿದ ಆಧಾರದ ಮೇಲೆ ಮಂಡ್ಯ ಜಿಲ್ಲಾ ಪಂಚಾಯತ್ ಸಿಇಒ ಅವರು ಒಂದು ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಕಳೆದ 20ರಂದು ವರದಿ ಸಲ್ಲಿಸಿದ್ದಾರೆ ಎಂದರು.

ಸಚಿವರು ಸಭೆ ಮಾಡಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಿರುವುದು ನಿಜ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇಂದು ತನ್ನ ಅಧಿಕಾರ ದುರ್ಬಳಕೆ ಮಾಡಿರುವ ಬಿಜೆಪಿ ಮಂತ್ರಿ ರಕ್ಷಣೆಗೆ ಮುಂದಾಗಿದೆ. ರಾಜ್ಯ ಹಾಗೂ ಕೇಂದ್ರ ಚುನಾವಣಾ ಆಯೋಗವಿದ್ದು, ರಾಜ್ಯ ಚುನಾವಣಾ ಆಯೋಗದ ಮುಖ್ಯಸ್ಥರು ಸಚಿವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಜತೆಗೆ ನಾಲ್ಕು ಕ್ಷೇತ್ರದಲ್ಲಿ ಪ್ರಚಾರಕ್ಕೆ ಹೋಗದಂತೆ ನಿರ್ಬಂಧ ಹಾಕಬೇಕು ಎಂದು ಕಾಂಗ್ರೆಸ್ ಪರವಾಗಿ ಒತ್ತಾಯಿಸಿದರು.

About The Author