ನಮ್ಮ‌ಸರ್ಕಾರ ಅಭಿವೃದ್ಧಿ ವಿಷಯದಲ್ಲಿ ನುಡಿದಂತೆ ನಡೆದಿದೆ- ಸಚಿವ ಕೆ.ಗೋಪಾಲಯ್ಯ

ಮಂಡ್ಯ :  ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳು ಕೈ ಗೊಂಡಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಮತ ಕೇಳುವಂತೆ ಬಿಜೆಪಿ ಮುಖಂಡರಿಗೆ ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ‌ಖಾತೆ ಸಚಿವ ಕೆ.ಗೋಪಾಲಯ್ಯ ಕರೆ ನೀಡಿದರು.

ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಸಂಬಂಧ ಮಂಡ್ಯ ನಗರದಲ್ಲಿ ನಡೆದ ನಗರ ಬಿಜೆಪಿ ಘಟ ನಾಯಕರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಮಂಡ್ಯ ಜಿಲ್ಲೆಯಲ್ಲಿ ಪರಿವರ್ತನಾ ಯುಗ‌ ಪ್ರಾರಂಭವಾಗಿದೆ. ಮೈ ಶುಗರ್ ಸಕ್ಕರೆ ಕಾರ್ಖಾನೆ ‌ವಿಚಾರದಲ್ಲಿ ಸರ್ಕಾರ ನುಡಿದಂತೆ ನಡೆದುಕೊಂಡಿದೆ. ಈಗಾಗಲೇ ಕಾರ್ಖಾನೆ ಆರಂಭಕ್ಕೆ ಹಣ ನೀಡಿದ್ದು, ಶೀಘ್ರವೇ ಪುನಾರಂಭಗೊಳ್ಳಲಿದೆ ಎಂದು ತಿಳಿಸಿದರು

ಕೇಂದ್ರದಲ್ಲಿ ನರೇಂದ್ರ ಮೋದಿ ನೇತ್ರತ್ವದಲ್ಲಿ ಮತ್ತು ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಈಗಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತ್ರತ್ವದಲ್ಲಿ ನಮ್ಮ ಸರ್ಕಾರ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. ಇದರ ಜೊತೆಗೆ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಸಂಘಟಿಸುವ ಕೆಲಸ ಈಗಾಗಲೇ ಆರಂಭಗೊಂಡಿದೆ. ಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದರು.

ಕೇಂದ್ರದಲ್ಲಿ ನರೇಂದ್ರ ಮೋದಿಯವರ ಸರ್ಕಾರ , ರಾಜ್ಯದಲ್ಲಿ ಈ ಹಿಂದೆ ಆಡಳಿತ ಮಾಡಿದ ಬಿ.ಎಸ್.ಯಡಿಯೂರಪ್ಪ ಮತ್ತು ಈಗಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನೀಡಿರುವ ಜನಪರ ಕೆಲಸಗಳನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ.‌ಇದೇ ಅಂಶಗಳನ್ನು ಮುಂದಿಟ್ಟು ಕೊಂಡು ಜಿಲ್ಲೆಯಲ್ಲಿ ಪಕ್ಷದ ಬಲವರ್ಧನೆ ಮಾಡಲಾಗುವುದು ಎಂದು ಹೇಳಿದರು.

ದಕ್ಷಿಣ ಪದವೀಧರ ಕ್ಷೇತ್ರದಲ್ಲಿ 12 ಸಾವಿರ ಮತಗಳಿವೆ. ಈ ಎಲ್ಲರನ್ನೂ ಭೇಟಿ ಮಾಡಿ ಮತ ಕೇಳಬೇಕು ಮತ್ತು ಮುಂದಿನ ವರ್ಷ ಬರಲಿರುವ ವಿಧಾನ ಸಭಾ‌ ಚುನಾವಣೆಗೂ ಕೂಡ ಇದೇ 12 ಸಾವಿರ ಪದವೀಧರ ಕುಟುಂಬಗಳ‌ 40 ಸಾವಿರಕ್ಕೂ ‌ಅಧಿಕ‌ ಮತಗಳನ್ನು ಪಡೆಯುವ ನಿಟ್ಟಿನಲ್ಲಿ ನಾಯಕತ್ವದ ಗುಣಗಳನ್ನು ‌ಬೆಳೆಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು.

About The Author