ಬೆಂಗಳೂರು: ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದಂತ ಹಿರಿಯ ನಟ, ಕಾಂಗ್ರೆಸ್ ಮುಖಂಡ ಮುಖ್ಯಮಂತ್ರಿ ಚಂದ್ರು ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಹಾಗೂವಿಪಕ್ಷ ನಾಯಕ ಸಿದ್ಧರಾಮಯ್ಯ ಅವರಿಗೆ ರಾಜೀನಾಮೆ ಪತ್ರ ಬರೆದಿದ್ದು, ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ವೈಯಕ್ತಿಕ ಕಾರಣಗಳಿಂದ ರಾಜೀನಾಮೆಯನ್ನು ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಇನ್ನೂ ದೇಶದಲ್ಲಿ ಸುದೀರ್ಘ ಇತಿಹಾಸವಿರುವ ಕಾಂಗ್ರೆಸ್ ಪಕ್ಷಕ್ಕೆ ನಾನು ವ್ಯಾಪಕ ನೆಲೆಯಲ್ಲಿ ಜನಸೇವೆ ಮಾಡುವ ಆಶಯಂದಿದ ಪಕ್ಷಕ್ಕೆ ಸೇರ್ಪಡೆ ಹೊಂದಿದೆ. ಪಕ್ಷಕ್ಕೆ ಸೇರಿದಂದಿನಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆಂಬ ತೃಪ್ತಿ ಇದೆ ಎಂದು ಹೇಳಿದ್ದಾರೆ.



