Thursday, December 26, 2024

Latest Posts

ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಯಿಂದ ನಾಮಪತ್ರ ಸಲ್ಲಿಸಿದವರು ಯಾರು ಗೊತ್ತ..?

- Advertisement -

ರಾಜ್ಯ ಸಭಾ ಚುನಾವಣೆಗೆ ಕಾಂಗ್ರೆಸ್​ನಿಂದ 2ನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿಖಾನ್ ನಾಮಪತ್ರ
ಕಾಂಗ್ರೆಸ್​ನಿಂದ ಜಯರಾಮ್ ರಮೇಶ್ ಅಭ್ಯರ್ಥಿ ಆಗಿದ್ದಾರೆ. ಈ ಮೂವರ ಗೆಲುವು ನಿಶ್ಚಿತವಾಗಿದ್ದು, ನಾಲ್ಕನೇ ಅಭ್ಯರ್ಥಿಯಾಗಿ ಕಾಂಗ್ರೆಸ್​ನಿಂದ ಮನ್ಸೂರ್ ಅಲಿಖಾನ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಸಹ ಕಣಕ್ಕಿಳಿಯುವ ಸಿದ್ಧತೆ ನಡೆಸಿದ್ದಾರೆ.

ರಾಜ್ಯಸಭಾ ಚುನಾವಣೆ ಹಿನ್ನೆಲೆ ರಾಜಕೀಯ ಚಟುವಟಿಕೆ ಗರಿಗೆದರಿದೆ. ಕಾಂಗ್ರೆಸ್​ನಿಂದ ರಾಜ್ಯಸಭಾ ಮೊದಲನೇ ಅಭ್ಯರ್ಥಿಯಾಗಿ ಜೈ ರಾಮ್ ರಮೇಶ್ ಹಾಗೂ ಎರಡನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿಖಾನ್ ನಾಮಪತ್ರ ಸಲ್ಲಿಕೆ ಮಾಡಿದರು.
ವಿಧಾನಸೌಧದಲ್ಲಿ ವಿಧಾನಸಭೆ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿಯಾಗಿರುವ ಎಂ.ಕೆ ವಿಶಾಲಾಕ್ಷಿಗೆ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ,ಯು.ಟಿ.ಖಾದರ್, ಜಮೀರ್ ಅಹಮದ್ ಖಾನ್ ಉಪಸ್ಥಿತರಿದ್ದರು.

- Advertisement -

Latest Posts

Don't Miss