ಬೆಂಗಳೂರು: ರೈತ ನಾಯಕ ರಾಕೇಶ್ ಟಿಕಾಯತ್ ಅವರ ಮೇಲಿನ ದೈಹಿಕ ಹಲ್ಲೆ, ಭಿನ್ನಾಭಿಪ್ರಾಯವನ್ನು ಸಿದ್ದಾಂತದ ಮೂಲಕ ಎದುರಿಸಲಾಗದ ಬಿಜೆಪಿ ಮತ್ತು ಬೆಂಬಲಿಗರ ಬೌದ್ದಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ. ಸಹನೆ-ಸಜ್ಜನಿಕೆಗೆ ಹೆಸರಾದ ನಾಡನ್ನು ಗೂಂಡಾ ರಾಜ್ಯವನ್ನಾಗಿ ಮಾಡಿದ ಕುಖ್ಯಾತಿ ಬಿಜೆಪಿ ಸರ್ಕಾರಕ್ಕೆ ಸಲ್ಲುತ್ತದೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.
ರೈತ ನಾಯಕ #rakeshtikait
ಅವರ ಮೇಲಿನ
ದೈಹಿಕ ಹಲ್ಲೆ, ಭಿನ್ನಾಭಿಪ್ರಾಯವನ್ನು ಸಿದ್ದಾಂತದ ಮೂಲಕ ಎದುರಿಸಲಾಗದ@BJP4India
ಮತ್ತು ಬೆಂಬಲಿಗರ ಬೌದ್ದಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ.ಸಹನೆ-ಸಜ್ಜನಿಕೆಗೆ ಹೆಸರಾದ ನಾಡನ್ನು ಗೂಂಡಾ ರಾಜ್ಯವನ್ನಾಗಿ ಮಾಡಿದ ಕುಖ್ಯಾತಿ @BJP4Karnataka
ಸರ್ಕಾರಕ್ಕೆ ಸಲ್ಲುತ್ತದೆ.
2/2— Siddaramaiah (@siddaramaiah) May 30, 2022
ಟಿಕಾಯತ್ ಗೆ ಕಪ್ಪು ಮಸಿ ಬಳಿದು, ಹಲ್ಲೆ ನಡೆಸಿದ್ದರ ಬಗ್ಗೆ ಟ್ವಿಟ್ ಮಾಡಿರುವ ಅವರು, ರೈತ ನಾಯಕ ರಾಕೇಶ್ ಟಿಕಾಯತ್ ಅವರ ಮೇಲೆ ನಡೆದಿರುವ ಹಲ್ಲೆ ಅತ್ಯಂತ ಖಂಡನೀಯ ದುಷ್ಕೃತ್ಯ. ಮುಖ್ಯಮಂತ್ರಿ ಅವರೇ, ನೆನಪಿರಲಿ, ಈ ಗೂಂಡಾಗಳು ಮಸಿ ಬಳಿದಿರುವುದು ರಾಜ್ಯ ಸರ್ಕಾರದ ಮುಖಕ್ಕೆ. ಈ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಜೈಲಿಗೆ ಅಟ್ಟದಿದ್ದರೆ ಮುಖ್ಯಮಂತ್ರಿಗಳ ಕುರ್ಚಿಯಲ್ಲಿ ಕೂರುವ ನೈತಿಕತೆ ನಿಮಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ರೈತ ನಾಯಕ #rakeshtikait
ಅವರ ಮೇಲೆ ನಡೆದಿರುವ ಹಲ್ಲೆ ಅತ್ಯಂತ ಖಂಡನೀಯ ದುಷ್ಕೃತ್ಯ.@CMofKarnataka ಅವರೇ,
ನೆನಪಿರಲಿ,
ಈ ಗೂಂಡಾಗಳು ಮಸಿ ಬಳಿದಿರುವುದು ರಾಜ್ಯ ಸರ್ಕಾರದ ಮುಖಕ್ಕೆ.ಈ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಜೈಲಿಗೆ ಅಟ್ಟದಿದ್ದರೆ ಮುಖ್ಯಮಂತ್ರಿಗಳ ಕುರ್ಚಿಯಲ್ಲಿ ಕೂರುವ ನೈತಿಕತೆ ನಿಮಗಿಲ್ಲ.
1/2— Siddaramaiah (@siddaramaiah) May 30, 2022




