ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ. ಈ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.

ವಿಧಾನಸಭೆ ಕಾರ್ಯದರ್ಶಿ ಕಚೇರಿಗೆ ತೆರಳಿದಂತ ಅವರು, ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಸಿದರು. ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಅಶೋಕ್, ಸೋಮಣ್ಣ ಸೇರಿದಂತೆ ಹಲವು ನಾಯಕರು ಅವರಿಗೆ ಸಾಥ್ ನೀಡಿದರು. ಸೂಚಕರಾಗಿ ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ಭಾಗಿಯಾಗಿದ್ದರು.

ಇನ್ನೂ ಇನ್ನೇನು ಕೆಲವೇ ಕ್ಷಣಗಳಲ್ಲಿ ನಟ ಜಗ್ಗೇಶ್ ಹಾಗೂ ಲೆಹರ್ ಸಿಂಗ್ ಅವರು ಕೂಡ ರಾಜ್ಯಸಭೆ ಚುನಾವಣೆ ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ.

ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಕೆ ವೇಳೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮೆಲ್ಲರ ಭಾವನೆಗೆ ಗೌರವ ಕೊಟ್ಟು ನಿರ್ಮಲಾ ಸೀತಾರಾಮನ್ ಅವರಿಗೆ ಅವಕಾಶ ಕೊಟ್ಟಿದಾರೆ. ಅದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಲ್ಲಿಸ್ತೇನೆ. ನಿರ್ಮಲಾ ಸೀತಾರಾಮನ್ ಹಾಗೂ ಜಗ್ಗೇಶ್ ಇಬ್ಬರು ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್ ಕಣಕ್ಕಿಳಿಸಿದ್ದೇವೆ. ಅವರನ್ನೂ ಗೆಲ್ಲಿಸೋ ಪ್ರಯತ್ನ ಮಾಡ್ತಿದ್ದೇವೆ ಎಂದರು ಹೇಳಿದರು.

About The Author