ಮಲೆನಾಡಿನಲ್ಲಿ ಹೆಸರಾಂತ ಸಹಕಾರ ಸಾರಿಗೆ ಸಂಸ್ಥೆ ಎಂದು ಹೆಸರು ಮಾಡಿದ್ದ ಸಹಕಾರ ಸಾರಿಗೆ ಸಂಸ್ಥೆಯ ಅಧ್ಯಕ್ಷ ಧರ್ಮಪ್ಪ ಸದ್ಯ ನ್ಯಾಯಾಂಗ ಬಂದನದಲ್ಲಿದ್ದಾರೆ.
ಸುಮಾರು ಎಪ್ಪತ್ತು ವರ್ಷಗಳಿಂದ ಸೇವೆಯಲ್ಲಿದ್ದ ಸಹಕಾರ ಸಾರಿಗೆ ಸಂಸ್ಥೆಯಲ್ಲಿ ಮುನ್ನೂರ ಕ್ಕೂ ಹೆಚ್ಚು ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದರು ಆದರೇ ಸಂಸ್ಥೆಯ ಕಾರ್ಮಿಕರಿಗೆ ಪಿಎಫ್ಐ ಹಣ ನೀಡದೆ, ಸಹಕಾರ ಸಾರಿಗೆ ಸಂಸ್ಥೆಯಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ ಎಂಬ ಕೂಗೂ ಕೇಳಿಬಂದಿತ್ತು.
ಸುಮಾರು ಒಂದುವರೇ ತಿಂಗಳಿಂದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ತಹಸೀಲ್ದಾರ್ ಕಛೇರಿ ಮುಂಭಾಗ ಸಹಕಾರ ಸಾರಿಗೆ ಸಂಸ್ಥೆಯ ಕಾರ್ಮಿಕರು ಟೆಂಟ್ ಹಾಕಿ ಧರಣಿ ಸತ್ಯಾಗ್ರಹ ಪ್ರತಿಭಟನೆ ನಡೆಸುತ್ತಿದ್ದಾರೆ,ಇದರ ಬೆನ್ನಲ್ಲೆ ಸಂಸ್ಥೆಯ ಅಧ್ಯಕ್ಷ ಧರ್ಮಪ್ಪ ಜೈಲು ಸೇರಿದ್ದು, ಪ್ರತಿಭಟನೆ ಮಾಡುತ್ತಿರುವ ಕಾರ್ಮಿಕರಿಗೆ ಒಂದು ರೀತಿ ನ್ಯಾಯ ಸಿಕ್ಕಂತಾಗಿದೆ.
ಅಭಿಜಿತ್ ಕರ್ನಾಟಕ ಟಿವಿ ಚಿಕ್ಕಮಗಳೂರು.




