CET ಪರೀಕ್ಷೆಗೆ ಪ್ರವೇಶ ಪತ್ರ ರಿಲೀಸ್: ಡೌನ್ ಲೋಡ್ ಮಾಡಿಕೊಳ್ಳಲು ಈ ವಿಧಾನ ಅನುಸರಿಸಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಜೂನ್ 16 ಮತ್ತು 17ರಂದು 2022ರ ಇಂಜಿನಿಯರಿಂಗ್, ಕೃಷಿ ವಿಜ್ಞಾನ ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ನಿಗದಿ ಪಡಿಸಲಾಗಿದೆ. ಈ ಪರೀಕ್ಷೆಗೆ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ ನೀಡಿದೆ.

ಈ ಬಗ್ಗೆ ಕೆಇಎ ಮಾಹಿತಿ ಬಿಡುಗಡೆ ಮಾಡಿದ್ದು, ಜೂನ್ 16 ಮತ್ತು 17ರಂದು ಹಾಗೂ ಹೊರ ನಾಡು, ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ಜೂನ್ 18ರಂದು ಸೇರಿದಂತೆ ಸಿಇಟಿ ಪರೀಕ್ಷೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.

ಈ ಪರೀಕ್ಷೆಗಾಗಿ ಅಭ್ಯರ್ಥಿಗಳಿಗೆ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು https://cetonline.karnataka.gov.in/kea/ ಈ ಲಿಂಕ್ ಕ್ಲಿಕ್ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ತಿಳಿಸಿದೆ.

 

About The Author