ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿನ ಜಾಮಿಯಾ ಮಸೀದಿ ವಿವಾದ ಈಗ ತಾರಕಕ್ಕೇರಿದೆ. ಇಂದು ವಿಶ್ವ ಹಿಂದೂ ಪರಿಷತ್ ನಿಂದ ಜಾಮಿಯಾ ಮಸೀದಿ ವಿವಾದ ಕುರಿತಂತೆ ಶ್ರೀರಂಗಪಟ್ಟಣ ಚಲೋಗೆ ಕರೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೊತೆಗೆ, ಮುಂಜಾಗ್ರತಾ ಕ್ರಮವಾಗಿ ಎಲ್ಲೆಲ್ಲೂ ಪೊಲೀಸರ ಸರ್ಪಗಾವಲು ಹೆಚ್ಚಿಸಲಾಗಿದೆ.
ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ ಸಂಬಂಧ ಇಂದು ವಿಶ್ವ ಹಿಂದೂ ಪರಿಷತ್ ನಿಂದ ಚಲೋ ಪ್ರತಿಭಟನೆ ಹಮ್ಮಿಕೊಂಡಿರುವುದರಿಂದ, ಶ್ರೀರಂಗಪಟ್ಟಣ ತಹಶೀಲ್ದಾರ್, ನಿನ್ನೆಯಿಂದಲೇ ಜಾರಿಗೆ ಬರುವಂತೆ ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮಂಡ್ಯ, ಪಾಂಡವಪುರ, ಮೈಸೂರು, ಬನ್ನೂರು ಕಡೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಶ್ರೀರಂಗಪಟ್ಟಣ ಚಲೋ ತಡೆಯುವ ನಿಟ್ಟಿನಲ್ಲಿ ಪೊಲೀಸರು ಚೆಕ್ ಪೋಸ್ಟ್ ಸ್ಥಾಪಿಸಿದ್ದಾರೆ. ಅಲ್ಲದೇ ಜಾಮಿಯಾ ಮಸೀದಿ ಸುತ್ತಾಮುತ್ತ ಬಿಗಿ ಪೊಲೀಸ್ ಬಂದೋಭಸ್ತ್ ಕೈಗೊಳ್ಳಲಾಗಿದೆ. ಈ ನಡುವೆಯೂ ಇಂದು ವಿ.ಹೆಚ್ ಪಿಯಿಂದ ಚಲೋ ನಡೆಸಲಾಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.