ಬೆಂಗಳೂರು: ಈಗಾಗಲೇ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷರನ್ನಾಗಿ ರೋಹಿತ್ ಚಕ್ರತೀರ್ಥ ಅವರನ್ನು ನೇಮಿಸಿದ್ದರ ವಿರುದ್ಧ ಹಲವರು ವಿರೋಧ ವ್ಯಕ್ತ ಪಡಿಸಿದ್ದರು. ಈ ನಡುವೆಯೂ, ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಬಳಿಕ, ಈಗ ಪಿಯು ಪಠ್ಯಪರಿಷ್ಕರಣೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಈ ಪರಿಷ್ಕಣೆಯ ಹೊಣೆಗಾರಿಕೆಯನ್ನು ಮತ್ತೆ ರೋಹಿತ್ ಚಕ್ರತೀರ್ಥ ಸಮಿತಿಗೆ ನೀಡಿರುವುದು, ಈಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.
ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಮುಕ್ತಾಯದ ನಂತ್ರ, ರಾಜ್ಯ ಸರ್ಕಾರ ರೋಹಿತ್ ಚಕ್ರತೀರ್ಥ ಅವರ ಸಮಿತಿಯನ್ನು ವಿಸರ್ಜಿಸಿರೋದಾಗಿ ತಿಳಿಸಿತ್ತು. ಆದ್ರೇ.. ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಬಳಿ, ಈಗ ಪಿಯು ಪಠ್ಯಪುಸ್ತಕ ಪರಿಷ್ಕರಣೆಗೆ ಚಾಲನೆಯನ್ನು ನೀಡಿದೆ.
ರೋಹಿತ್ ಚಕ್ರತೀರ್ಥ ಅವರ ಪಠ್ಯಪುಸ್ತಕರ ರಚನಾ ಸಮಿತಿಗೆ ರಾಜ್ಯ ಸರ್ಕಾರ ಪಿಯು ಪಠ್ಯಪುಸ್ತಕ ಪರಿಷ್ಕರಣೆ ಹೊಣೆಗಾರಿಕೆ ವಹಿಸಿರೋದು, ಈಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಅಲ್ಲದೇ ಈ ನಿರ್ಧಾರವನ್ನು ವಾಪಾಸ್ ತೆಗೆದುಕೊಳ್ಳುವಂತೆಯೂ ಹಲವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.