ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಶಾಸಕರು ಸಾಮೂಹಿಕ ರಾಜೀನಾಮೆಯಿಂದ ಸರ್ಕಾರ ಅಭದ್ರಗೊಂಡ ಶಾಕ್ ನಲ್ಲಿರೋ ದೋಸ್ತಿಗಳಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದೆ.
ನಾನಾ ಕಾರಣಗಳನ್ನು ನೀಡಿ ಕಾಂಗ್ರೆಸ್-ಜೆಡಿಎಸ್ ನ ಮಂದಿ ಶಾಸಕರು ರಾಜೀನಾಮೆ ನೀಡಿರೋ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಆದ್ರೆ ಇದೀಗ ನಾಳೆ ಕಾಂಗ್ರೆಸ್ ನ ಮತ್ತಷ್ಟು ಶಾಸಕರು ರಾಜೀನಾಮೆ ನೀಡಲು ರೆಡಿಯಾಗಿದ್ದಾರೆ ಅನ್ನೋ ಮಾಹಿತಿ ಇದೀಗ ಕಾಂಗ್ರೆಸ್ ನಾಯಕರಲ್ಲಿ ತಲ್ಲಣ ಮೂಡಿಸಿದೆ. ಹೀಗಾಗಿ ರಾಜ್ಯಕ್ಕೆ ಈಗಾಗಲೇ ಭೇಟಿ ನೀಡಿರೋ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಗುಪ್ತ ಸ್ಥಳಕ್ಕೆ ತೆರಳಿ ಚರ್ಚೆ ನಡೆಸಿದ್ದಾರೆ. ತಮ್ಮ ಭದ್ರತಾ ವಾಹನವನ್ನು ಬಿಟ್ಟು ಒಂದೇ ಕಾರಿನಲ್ಲಿ ಅಜ್ಞಾತ ಸ್ಥಳಕ್ಕೆ ತೆರಳಿರೋ ಮೂವರು ನಾಯಕರು ಅತೃಪ್ತ ಶಾಸಕರನ್ನು ಮನವೊಲಿಸೋ ಕುರಿತಾಗಿ ಚರ್ಚೆಯಲ್ಲಿ ತೊಡಗಿದ್ದಾರೆ.
ಬಿಜೆಪಿ ಆಪರೇಷನ್ ಗೆ ದೋಸ್ತಿ ಗಢಗಢ..! ಮಿಸ್ ಮಾಡದೇ ಈ ವಿಡಿಯೋ ನೋಡಿ