- Advertisement -
ಶಿವಮೊಗ್ಗ : ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಶಿವಮೊಗ್ಗ ಇಲ್ಲಿ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಎಸ್‍ಎಸ್‍ಎಲ್‍ಸಿ ಮುಗಿಸಿದ ಸಹಕಾರ ಸಂಘ ಸಂಸ್ಥೆಗಳ ಸಿಬ್ಬಂದಿಗಳು, ಖಾಸಗಿ ಹಾಗೂ ಎಸ್.ಸಿ/ಎಸ್.ಟಿ ಅಭ್ಯರ್ಥಿಗಳು ಪ್ರವೇಶ ಪಡೆಯಬಹುದು. ತರಬೇತಿಯ ಅವಧಿಯು 6 ತಿಂಗಳಾಗಿದ್ದು ಸಂಘ ಸಂಸ್ಥೆಗಳ ಸಿಬ್ಬಂದಿಗಳಿಗೆ ಮತ್ತು ಖಾಸಗಿ ಅಭ್ಯರ್ಥಿಗಳಿಗೆ ಮಾಸಿಕ ರೂ.100/- ಹಾಗೂ ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ರೂ.500/- ಶಿಷ್ಯವೇತನ ನೀಡಲಾಗುವುದು.
ಅರ್ಜಿ ಸಲ್ಲಿಸಲು ಜೂ.25 ಕಡೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗೆ ಮೊ.ಸಂ: 7022429440 ನ್ನು ಸಂಪರ್ಕಿಸಬಹುದೆಂದು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್‍ನ ಪ್ರಾಂಶುಪಾಲ ರವಿ.ಎನ್ ತಿಳಿಸಿದ್ದಾರೆ.
- Advertisement -