Saturday, April 19, 2025

Latest Posts

ಪುಟ್ಟಣ್ಣ ಕಣಗಾಲ್ ಅಣ್ಣನ ಮಗ ಚಿತ್ರ ಸಾಹಿತಿ ಪುರುಷೋತ್ತಮ ಕಣಗಾಲ್ ನಿಧನ

- Advertisement -

ಬೆಂಗಳೂರು: ಕನ್ನಡದ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಅಣ್ಣನ ಮಗ, ಚಿತ್ರ ಸಾಹಿತಿ ಪುರುಷೋತ್ತಮ ಕಣಗಾಲ್ (69) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.

ಇಂದು ಮುಂಜಾನೆ ಪುರುಷೋತ್ತಮ ಕಣಗಾಲ್ ಅವರು ಅಮೆರಿಕದ ತಮ್ಮ ಮಗಳ ನಿವಾಸದಲ್ಲಿ ಕೊನೆಯುಸಿರೆಳೆದರು. ಅಮೆರಿಕದಲ್ಲಿಯೇ ಪುರುಷೋತ್ತಮ್ ಅಂತ್ಯಸಂಸ್ಕಾರ ನೆರವೇರಿಸಲು ಕುಟುಂಬ ವರ್ಗ ನಿರ್ಧರಿಸಿರೋದಾಗಿ ತಿಳಿದು ಬಂದಿದೆ.

ಖ್ಯಾತ ಸಾಹಿತಿಯಾಗಿದ್ದ ಪುರುಷೋತ್ತಮ ಕಣಗಾಲ್ ಪ್ರಭಾಕರ ಶಾಸ್ತ್ರಿ ಅವರ ಪುತ್ರ. ಅವರು ಕನ್ನಡದ ಸಾಕಷ್ಟು ಚಿತ್ರಗಳಿಗೆ ಗೀತ ರಚನೆ ಮಾಡಿದ್ದಾರೆ. ಅಲ್ಲದೇ ಕಣಗಾಲ್ ನೃತ್ಯಾಲಯ ಹಾಗೂ ಪುಟ್ಟಣ್ಣ ಕಣಗಾಲ್ ಟ್ರಸ್ಟ್ ಮುಖ್ಯಸ್ಥರಾಗಿ ಪುರುಷೋತ್ತಮ ಕಣಗಾಲ್ ಕಾರ್ಯನಿರ್ವಹಿಸಿದ್ದರು.

 

- Advertisement -

Latest Posts

Don't Miss