- Advertisement -
ಬೆಂಗಳೂರು: ಉಪಹಾರ ಕೂಟ ಏರ್ಪಡಿಸಿದ ಕಾಂಗ್ರೆಸ್ ನಾಯಕರು ಇದೀಗ ಕಾರ್ಯಕ್ರಮಕ್ಕೆ ಬಂದ ಎಲ್ಲಾ ಸಚಿವರ ರಾಜೀನಾಮೆ ಪಡೆದಿದೆ.
ಸರ್ಕಾರದಲ್ಲಿ ಕೋಲಾಹಲ ಎಬ್ಬಿಸಿ ಬಿಜೆಪಿ ಹೊಸ್ತಿಲಲ್ಲಿ ನಿಂತಿರೋ 14 ಮಂದಿ ಶಾಸಕರನ್ನು ಮತ್ತೆ ಕರೆತರೋದಕ್ಕೆ ಕಾಂಗ್ರೆಸ್ ನಾಯಕರು ಹಾಲಿ ಸಚಿವರ ಸಾಮೂಹಿಕ ರಾಜೀನಾಮೆ ಪಡೆದಿದ್ದಾರೆ. ಡಿಸಿಎಂ ಪರಮೇಶ್ವರ್ ನಿವಾಸದಲ್ಲಿ ಏರ್ಪಡಿಸಲಾಗಿರುವ ಉಪಹಾರ ಕೂಟದಲ್ಲಿ ಭಾಗಿಯಾದ ಕಾಂಗ್ರೆಸ್ ನ ಸಚಿವರು ಇದೀಗ ನಾಯಕರ ಅಣತಿಯಂತೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಸೂಚನೆಯಂತೆ ಕಾಂಗ್ರೆಸ್ ಸಚಿವರು ಸಿಎಲ್ ಪಿ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ.
ಜೋಡೆತ್ತಿನ ಸರ್ಕಾರ ಉಳಿಯುತ್ತಾ..? ಮಿಸ್ ಮಾಡದೇ ಈ ವಿಡಿಯೋ ನೋಡಿ
- Advertisement -