ಆಸಿಡ್ ದಾಳಿ ಮಾಡುವವರ ಮೇಲೆ ಕಠಿಣ ಕಾನೂನು – CM ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಆಸಿಡ್ ದಾಳಿ ಮಾಡುವವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲು ಈಗಿರುವ ಕಾನೂನನ್ನು ಇನ್ನಷ್ಟು ಕಠಿಣಗೊಳಿಸಿ ರೂಪಿಸುವಂತೆ ಕಾನೂನು ತಜ್ಞರಿಗೆ ಸೂಚಿಸಲಾಗುವು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬೆಂಗಳೂರಿನಲ್ಲಿ ಮತ್ತೊಂದು ಆಸಿಡ್ ದಾಳಿಯಾಗಿರುವುದು ಬಹಳ ದುರದೃಷ್ಟಕರ. ಈಗಿರುವ ಕಾನೂನನ್ನು ಇನ್ನಷ್ಟು ಕಠಿಣಗೊಳಿಸುವ ಚಿಂತನೆ ಇದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಕ್ರಮ ವಹಿಸಲಾಗುವುದು ಎಂದರು.

About The Author