ರಾಯಚೂರು ಕಲುಷಿತ ನೀರು ಪ್ರಕರಣ: ಅಗತ್ಯ ಬಿದ್ದರೆ ಕ್ರಮಿನಲ್ ಮೊಕದ್ದಮೆ – CM ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ರಾಯಚೂರು ಕಲುಷಿತ ನೀರು ಪ್ರಕರಣದ ಬಗ್ಗೆ ತನಿಖೆಯಾಗುತ್ತಿದೆ.ಅಗತ್ಯ ಬಿದ್ದರೆ ಕ್ರಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಎಲ್ಲಾ ವಾರ್ಡಿನ ನೀರಿನ ಮಾದರಿಯನ್ನು ಸಂಗ್ರಹಿಸಿ ತನಿಖೆ ಮಾಡಲಾಗುತ್ತಿದೆ ಎಂದರು.

About The Author