Thursday, December 5, 2024

Latest Posts

ಸ್ನೇಹಿತರ ಜೊತೆ ಈಜಲು ಹೋದ ಯುವಕ, ಶವವಾಗಿ ಪತ್ತೆ..!

- Advertisement -

ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋಗಿ, ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ತಾತನ ಮನೆಗೆ ಬಂದಿದ್ದ ಯುವಕ ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಎರಡು ದಿನಗಳ ಬಳಿಕ ಕಾರ್ಯಚರಣೆ ನಡೆಸಿ ಯುವಕನ ಶವವನ್ನು ಪತ್ತೆ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಕೆರೆಯಲ್ಲಿ ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದ್ದು, ಶರತ್ (25) ಮೃತ ಯುವಕನಾಗಿದ್ದಾನೆ.

ಮೃತ ಯುವಕ ಯಲಹಂಕ ತಾಲೂಕಿನ ಹನಿಯೂರು ಗ್ರಾಮದ ನಿವಾಸಿಯಾಗಿದ್ದು, ನಿನ್ನೆ ರಾಜಘಟ್ಟದ ತಾತನ ಮನೆಗೆ ಬಂದಿದ್ದ ಯುವಕ ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋಗಿ, ಮುಳುಗಿ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹಕ್ಕಾಗಿ ಹುಡುಕಾಟ ನಡೆಸಲಾಗಿತ್ತು. ಆದರೆ ಶವ, ಪತ್ತೆಯಾಗಿರಲಿಲ್ಲ. ರಾತ್ರಿಯಾದ ಕಾರಣದಿಂದ ಕಾರ್ಯಚರಣೆ ನಿಲ್ಲಿಸಿ ಇಂದು ಬೆಳಿಗ್ಗೆಯಿಂದ ಮೃತದೇಹ ಪತ್ತೆಗಾಗಿ ಹುಡುಕಾಟ ನಡೆಸಿದ್ದು, ಇಂದು ಬೆಳಗ್ಗೆ 10 ಗಂಟೆ ಸಮಯದಲ್ಲಿ ಶವ ಪತ್ತೆಯಾಗಿದೆ. ಇನ್ನು ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

- Advertisement -

Latest Posts

Don't Miss