ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಿಚಾರದಲ್ಲಿ ರಾಹುಲ್ ಗಾಂಧಿಯನ್ನ ವಿಚಾರಣೆ ನಡೆಸುವಂತದ್ದು ಏನಿದೆ. ಸುಖಾ ಸುಮ್ಮನೆ ಕಾಂಗ್ರೆಸ್ ನಾಯಕರನ್ನು ಇಡಿ ವಿಚಾರಣೆ ನಡೆಸುತ್ತಿರೋದು ಏಕೆ ಎಂಬುದಾಗಿ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ವಾಗ್ದಾಳಿ ನಡೆಸಿದ್ದಾರೆ.
ಇಂದು ಇಡಿ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆಯಲ್ಲಿಯಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಇಡಿಯಿಂದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿಚಾರಣೆ ನಡೆಸುವಂತದ್ದು ಏನಿದೆ ಎಂಬುದಾಗಿ ಪ್ರಶ್ನಿಸಿದರು.
ಈ ಹಿಂದೆ ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆ ರನ್ನ ವಿಚಾರಣೆಗೆ ಒಳಪಡಿಸಿದ್ದರು. ಆಸ್ಕರ್ ಫರ್ನಾಂಡಿಸ್ ಬಳಿಕ ಖರ್ಗೆ ಯನ್ನ ಟ್ರಸ್ಟ್ ಗೆ ಸದಸ್ಯರನ್ನಾಗಿ ಮಾಡಲಾಗಿದೆ. ಖರ್ಗೆ ಅವರನ್ನ 6 ಗಂಟೆಗಳ ಕಾಲ ಕರೆದು ಇಡಿ ವಿಚಾರಣೆ ನಡೆಸಿದ್ದರು. ಆರು ಗಂಟೆಗಳ ಕಾಲ ವಿಚಾರಣೆ ನಡೆಸುವಂತದ್ದು ಏನಿತ್ತು ಎಂಬುದಾಗಿ ಕಿಡಿಕಾರಿದರು.
ಈ ಪ್ರಕರಣದಲ್ಲಿ ಏನಿಲ್ಲ ಅಂತಾ ಬಿಜೆಪಿ ಸರ್ಕಾರ ಇದ್ದಾಗಲೇ ಕೇಸ್ ಕ್ಲೋಸ್ ಮಾಡಲಾಗಿತ್ತು. ಈಗ ಹೆದರಿಸುವ ಪ್ರಯತ್ನ ಮಾಡ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ ಹೆದರುವುದಿಲ್ಲ ಎಂಬುದಾಗಿ ಆಕ್ರೋಶ ವ್ಯಕ್ತ ಪಡಿಸಿದರು.



