Monday, December 23, 2024

Latest Posts

ಶಿವಮೊಗ್ಗ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಖಾಲಿ ಇರುವ, ಗ್ರಂಥಾಲಯ ಮೇಲ್ವಿಚಾರಕರ ಭರ್ತಿಗೆ ಅರ್ಜಿ ಆಹ್ವಾನ

- Advertisement -

ಶಿವಮೊಗ್ಗ : ಜಿಲ್ಲೆಯ ವಿವಿಧ ತಾಲೂಕುಗಳ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿನ ಗ್ರಂಥಾಲಯಗಳ ಮೇಲ್ವಿಚಾರಕರ ಹುದ್ದೆಗಳಿಗೆ ಗೌರವ ಸಂಭಾವನೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಸ್ಥಳೀಯ ಎಸ್.ಎಸ್.ಎಲ್.ಸಿ. ಪಾಸಾಗಿರುವ ನಿವಾಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಶಿಕಾರಿಪುರ ತಾಲೂಕು ಚಿಕ್ಕಜಂಬೂರು ಮತ್ತು ಹೊಸೂರು, ಶಿವಮೊಗ್ಗ ತಾಲೂಕು ಅಬ್ಬಲಗೆರೆ, ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಿಗೆ ಮೇಲ್ವಿಚಾರಕರನ್ನು ನೇಮಿಸಿಕೊಳ್ಳುತ್ತಿದ್ದು, ನಿಗಧಿತ ನಮೂನೆ ಅರ್ಜಿಗಳನ್ನು ಆಯಾ ಗ್ರಾ.ಪಂ.ಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ದಿ: 14/07/2022 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕ ಸಿ.ಜೆ.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಆಯಾ ಗ್ರಾಮ ಪಂಚಾಯತಿ, ಜಿ.ಕೇ.ಗ್ರಂ.ದ ಉಪನಿರ್ದೇಶಕರ ಕಚೇರಿ ದೂ.ಸಂ.: 08182-222905 ನ್ನು ಸಂಪರ್ಕಿಸುವುದು.

- Advertisement -

Latest Posts

Don't Miss