ಮುಂಬೈ:ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಐಪಿಎಲ್ ವಿಜೇತ ನಾಯಕ ಹಾರ್ದಿಕ್ ಪಾಂಡ್ಯ `Áರತ ಕ್ರಿಕೆಟ್ ತಂಡದ ನಾಯಕತ್ವ ವಹಿಸಲಿದ್ದಾರೆ. ಜೂ.26 ಮತ್ತು ಜೂ.28ರಂದು ನಡೆಯಲಿದೆ.
ವಿಕೆಟ್ ಕೀಪರ್ ರಿಷಭ್ ಪಂತ್ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯ ಆಡಲು ತೆರೆಳುವುದರಿಂದ ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ. ಸದ್ಯ ದ.ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಉಪನಾಯಕನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪಂತ್ ಅನುಪಸ್ಥಿತಿಯಲ್ಲಿ ದಿನೇಶ್ ಕಾರ್ತಿಕ್ ಅಥವಾ ಇಶನ್ ಕಿಶನ್ ವಿಕೆಟ್ ಕೀಪರ್ ಆಯ್ಕೆಗಳಿವೆ.
ಭಾರತ ತಂಡ : ಹಾರ್ದಿಕ್ ಪಾಂಡ್ಯ (ನಾಯಕ), ಭುವನೇಶ್ವರ್ ಕುಮಾರ್ (ಉಪನಾಯಕ), ಇಶನ್ ಕಿಶನ್, ಋತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯ ಕುಮಾರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಯಜ್ವಿಂದರ್ ಚಾಹಲ್, ಅಕ್ಷರ್ ಪಟೇಲ್,ರವಿ ಬಿಷ್ಣೋಯಿ, ಹರ್ಷಲ್ ಪಟೇಲ್, ಆವೇಶ್ ಖಾನ್, ಆರ್ಷದೀಪ್ ಸಿಂಗ್, ಉಮ್ರಾನ್ ಮಲ್ಲಿಕ್