ಬೈಕ್, ಟೆಂಪೋ ಕದ್ದಿದ್ದ ಆರೋಪಿ ಅಂದರ್..!

ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಹೆಗ್ಗನಹಳ್ಳಿ ನಿವಾಸಿ, 23 ವಯಸ್ಸಿನ ರಾಜ ಶೇಖರ್ ನನ್ನು ಬಂಧಿಸಿದ್ದಾರೆ. ಈತನ ಇಬ್ಬರು ಸಹಚರರು ಪರಾರಿಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಮೇ 26 ರಂದು ಆರೋಪಿ ಠಾಣೆ ವ್ಯಾಪ್ತಿಯ ಮನೆಯೊಂದರ ಮುಂಭಾಗ ನಿಲ್ಲಿಸಿದ್ದ ಬೈಕ್ ಕಳವು ಮಾಡಿದ್ದ. ಈ ಸಂಬಂದ, ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.

ವಿಚಾರಣೆ ವೇಳೆ ತನ್ನ ಇಬ್ಬರು ಸಹಚರರ ಜತೆ ಸೇರಿಕೊಂಡು ಮನೆ ಮುಂದೆ ನಿಲಿಸಿದ್ದ ದ್ವಿಚಕ್ರ ವಾಹನಗಳು ಹಾಗೂ ಒಂದು ಟಾಟಾ ಎಸ್ ವಾಹನವನ್ನು ಕಳವು ಮಾಡಿ ಬೇರೆಡೆ ಮಾರಾಟ ಮಾಡಿದ್ದಾಗಿ ಹೇಳಿಕೆ ನೀಡಿದ್ದಾನೆ. ಈ ಸಂಬಂದ ಆರೋಪಿಗಳಿಂದ 2.70 ಲಕ್ಷ ರೂ. ಮೌಲ್ಯದ 3 ದ್ವಿಚಕ್ರ ವಾಹನಗಳು, 1 ಟಾಟಾ ಎಸ್ ವಾಹನ ಜಪ್ತಿ ಮಾಡಲಾಗಿದೆ. ಅಲ್ಲದೆ ಇವರ ಬಂಧನದಿಂದ ರಾಜಗೋಪಾಲನಗರ ಮತ್ತು ಬ್ಯಾಡರಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದ ವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ.

ಇನ್ನು ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

About The Author