ದಾವಣಗೆರೆ: ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ತಪ್ಪುಗಳನ್ನು ಸರಿಪಡಿಸಲು ಸರ್ಕಾರ ಮುಕ್ತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು
ದಾವಣಗೆರೆಯಲ್ಲಿ ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು ಈಗಾಗಲೇ ಶಿಕ್ಷಣ ಸಚಿವರೊಂದಿಗೆ ಮಾತನಾಡಿ ಸರಿಪಡಿಸಲಾಗುತ್ತಿದೆ. ಸಲಹೆಗಳಿಗೆ ನಾವು ಮುಕ್ತವಾಗಿದ್ದೇವೆ. ಇಲಾಖೆಯ ವೆಬ್ ಸೈಟ್ ನಲ್ಲಿಯೂ ವಿವರಗಳನ್ನು ನೀಡಲಾಗಿದೆ. ಹಿಂದಿನ ಪಠ್ಯಪುಸ್ತಕಗಳ ಬಗ್ಗೆಯೂ ಆಕ್ಷೇಪವಿದೆ. ಪಠ್ಯಪುಸ್ತಕಗಳನ್ನು ಸರಿಪಡಿಸಲು ಸರ್ಕಾರ ಮುಕ್ತವಾಗಿದೆ ಎಂದರು.




