ಶಿಕಾರಿಪುರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಬದಲಿಗೆ ಬಿಜೆಪಿ ಅಧಿಕಾರಕ್ಕೆ ತರುವುದಕ್ಕಾಗಿ ರಾಜ್ಯ ಪ್ರವಾಸ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಚುನಾವಣೆಗೆ ಸ್ಪರ್ಧಿಸಬೇಕು ಎನ್ನುವ ಉದ್ದೇಶಕ್ಕೆ ತಾಲೂಕಿನ 350ಕ್ಕೂ ಹೆಚ್ಚು ಕಾರ್ಯಕರ್ತರು ಬುಧವಾರ ಬೆಂಗಳೂರಿಗೆ ತೆರಳಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ವಯಸ್ಸಿನ ಲೆಕ್ಕಾಚಾರ ಹೈಕಮಾಂಡ್ ಒಪ್ಪಿಗೆ ಕುರಿತಂತೆ ಕಾರ್ಯಕರ್ತರು, ಅಭಿಮಾನಿಗಳಿಗೆ ಯಾವುದೇ ಗೊಂದಲ ಬೇಡ. ನನಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಮಾನಸಿಲ್ಲ ಎಂದು ತಿಳಿಸಿದ್ದಾರೆ.
ಶಿಕಾರಿಪುರದಿಂದ ಪುತ್ರ ವಿಜಯೇಂದ್ರ ಸ್ಪರ್ಧಿಸುವುದಕ್ಕೆ ಅವಕಾಶ ನೀಡಬೇಕು ಎಂದು ಕಾರ್ಯಕರ್ತರು ಒತ್ತಾಯ ಮಾಡುತ್ತಿರುವುದು ಸರಿಯಷ್ಟೆ. ಈ ಕುರಿತು ಹೈಕಮಾಂಡ್ ಜತೆ ಮಾತನಾಡಿ ಒಪ್ಪಿಗೆ ಕೊಡಿಸುತ್ತೇನೆ. ವಿಜಯೇಂದ್ರಗೂ ಸ್ಪರ್ಧೆಗೆ ಸೂಚಿಸುತ್ತೇನೆ ಎಂದು ಹೇಳಿದರು.