ಬೆಂಗಳೂರು: ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶದ ಬಳಿಕ, ಇದೀಗ ಅನುತ್ತೀರ್ಣ ಸೇರಿದಂತೆ ವಿವಿಧ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸಲು ದಿನಾಂಕ ಪ್ರಕಟಿಸಲಾಗಿದೆ. ಜೂನ್.27ರಿಂದ ಪೂರಕ ಪರೀಕ್ಷೆ ಆರಂಭಗೊಂಡು, ಜುಲೈ.4ರಂದು ಮುಕ್ತಾಯಗೊಳ್ಳಲಿದೆ.
ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಜೂನ್ 2022ರ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಹೀಗಿದೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ವೇಳಾಪಟ್ಟಿ
- ದಿನಾಂಕ 27-06-2022ರಂದು ಕೋರ್ ಸಬ್ಜೆಕ್ಟ್ ವಿಷಯಗಳಾದಂತ ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ
- ದಿನಾಂಕ 28-06-2022ರಂದು ಪ್ರಥಮ ಭಾಷೆಯ ವಿಷಯಗಳಾದಂತ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ ( NCERT ) ಮತ್ತು ಸಂಸ್ಕೃತ ಪರೀಕ್ಷೆ ನಡೆಯಲಿದೆ.
- ದಿನಾಂಕ 29-06-2022ರಂದು ದ್ವಿತೀಯ ಭಾಷೆಯ ವಿಷಯಗಳಾದಂತ ಇಂಗ್ಲೀಷ್ ಮತ್ತು ಕನ್ನಡ ಪರೀಕ್ಷೆ ನಡೆಯಲಿದೆ.
- ದಿನಾಂಕ 30-06-2022ರಂದು ಸಮಾಜ ವಿಜ್ಞಾನ.
- ದಿನಾಂಕ 01-07-2022ರಂದು ತೃತೀಯ ಭಾಷೆ ವಿಷಯಗಳಾದ ಹಿಂದಿ ( NCERT), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಪರೀಕ್ಷೆ ನಡೆಯಲಿದೆ.
- ದಿನಾಂಕ 01-07-2022ರಂದು ಎಸ್ ಎಸ್ ಕ್ಯೂ ಎಫ್ ಪರೀಕ್ಷಾ ವಿಷಯಗಳಾದಂತ ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್ಸ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್.
- ದಿನಾಂಕ 02-07-2022ರಂದು ಕೋರ್ ಸಬ್ಜೆಕ್ಟ್ ಗಳಾದಂತ ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಮತ್ತು ಎಲಿಕ್ಟ್ರಿಕಲ್ ಇಂಜಿನಿಯರಿಂಗ್-2, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್ ಮತ್ತು ಅರ್ಥಶಾಸ್ತ್ರ ಪರೀಕ್ಷೆ ನಡೆಯಲಿದೆ.
- ದಿನಾಂಕ 04-07-2022ರಂದು ಕೋರ್ ಸಂಬ್ಜೆಕ್ಟ್ ವಿಷಯಗಳಾದಂತ ಗಣಿತ, ಸಮಾಜಶಾಸ್ತ್ರ ಪರೀಕ್ಷೆ ನಡೆಯಲಿದೆ.





