ಬೆಂಗಳೂರು: ಸ್ಯಾಂಡಲ್ ವುಡ್ ನಟ ದಿಗಂತ್ ಫ್ಯಾಮಿಲಿ ಜೊತೆಗೆ ಗೋವಾಗೆ ಟ್ರಿಪ್ ತೆರಳಿದ್ದಂತ ಸಂದರ್ಭದಲ್ಲಿ ಅಪಘಾತಕ್ಕೆ ಒಳಗಾಗಿದ್ದಾರೆ. ಗೋವಾ ಸಮುದ್ರ ತಟದಲ್ಲಿ ಪಲ್ಟಿ ಹೊಡೆಯುತ್ತಿದ್ದಂತ ಸಂದರ್ಭದಲ್ಲಿ ಆಯತಪ್ಪಿ ಬಿದ್ದು ಅಪಘಾತಗೊಂಡ ಕಾರಣ, ಅವರ ಬೆನ್ನು ಮೂಳೆ, ಕಾಲಿಗೆ ಬಲವಾದ ಪೆಟ್ಟು ಬಿದ್ದು, ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿದು ಬಂದಿದೆ.
ಗೋವಾದಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ಕೊಡಿಸಿರುವಂತ ಅವರ ಪತ್ನಿ ನಟಿ ಐಂದ್ರಿತಾ ರೇ, ಅಲ್ಲಿಂದ ನೇರವಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಏರ್ ಲಿಫ್ಟ್ ಮೂಲಕ ಹೆಚ್ಚಿನ ಚಿಕಿತ್ಸೆಗಾಗಿ ಕರೆತರುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಈಗಾಗಲೇ ಗೋವಾದಿಂದ ನಟ ದಿಗಂತ್ ಅವರನ್ನು ಏರ್ ಲಿಫ್ಟ್ ಮಾಡಲಾಗಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯನ್ನು ತಲುಪಲಿದ್ದಾರೆ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಮತ್ತಷ್ಟು ಮಾಹಿತಿ ತಿಳಿದು ಬರಬೇಕಿದೆ.




