ಬಳ್ಳಾರಿಯಲ್ಲಿ ಕಳೆದ ರಾತ್ರಿ ಜರುಗಿದ ಶಾಸಕ ಸೋಮಶೇಖರ ರೆಡ್ಡಿ ರವರ ಹುಟ್ಟುಹಬ್ಬದ ಅಭಿನಂದನಾ ಸಮಾರಂಭದಲ್ಲಿ ಜರ್ನಾದನ ರೆಡ್ಡಿ ಮಾತನಾಡಿದ್ದು, ‘ನಾನು ಮನಸ್ಸು ಮಾಡಿದ್ರೆ ಇವತ್ತೆ ಒಂದು ದಿನಕ್ಕಾದ್ರೂ ಸಿಎಂ ಆಗ್ತೆನೆ’ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಬಳ್ಳಾರಿಯಲ್ಲಿ ಶಾಸಕ ಸೋಮಶೇಖರ ರೆಡ್ಡಿ ಹುಟ್ಟುಹಬ್ಬದ ಸಮಾರಂಭದಲ್ಲಿ ಮಾತನಾಡಿ ರೆಡ್ಡಿ, ರಾಮುಲು ಸಹೋದರರಿಗೆ ದುಡ್ಡಿನ ಅವಶ್ಯಕತೆ ಇಲ್ಲ, ನನಗೆ ಶಾಸಕ, ಮಂತ್ರಿಯಾಗಬೇಕೆಂಬ ಆಸೆಯಿಲ್ಲ. ನಾನು ಮನಸ್ಸು ಮಾಡಿದ್ರೆ ಒಂದು ದಿನ ಸಿಎಂ ಆಗ್ತೆನೆ ಎಂದು ಹೇಳಿದ್ದಾರೆ.
ಸಾಮಾನ್ಯ ಲೋಕಸಭಾ ಕ್ಷೇತ್ರದ ಕೊನೆಯ ಸದಸ್ಯರಾಗಿ ಕರುಣಾಕರ ರೆಡ್ಡಿ ಕೆಲಸ ಮಾಡಿದರು, ಸೋಮಶೇಖರ ರೆಡ್ಡಿ ಬಳ್ಳಾರಿ ನಗರಸಭೆ ಅಧ್ಯಕ್ಷರಾಗಿ ಕೆಲಸ ಮಾಡಿದರು. ನನಗಂತೂ ಯಾರಿಗೂ ಕೊಡಲಾರದಷ್ಟು ಕಷ್ಟ ಕೊಟ್ಟರು. ನಾನಿಂದು ನಿಮ್ಮ ಮುಂದೆ ಬಂದು ನಿಂತಿದ್ದೇನೆ, ಇಂತಹ ವಿಶೇಷ ಆಶೀರ್ವಾದ ಶ್ರೀ ಕನಕದುರ್ಗಮ್ಮ ದೇವಿ ನನಗೆ ನೀಡಿದ್ದಾಳೆ. ನನ್ನ ಜಾಗದಲ್ಲಿ ಬೇರೆ ಯಾರಾದರೂ ಇದ್ದಿದ್ದರೆ ಇಷ್ಟೊಂದು ಸಮಸ್ಯೆ ಎದುರಿಸಲಾಗುತ್ತಿರಲಿಲ್ಲ. ಅಷ್ಟು ತೊಂದರೆ ನನಗೆ ನೀಡಿದ್ದಾರೆ.
ನನ್ನ ಬಂಧನ ಮಾಡಲು ಬಂದಿದ್ದ ಸಿಬಿಐ ಅಧಿಕಾರಿಗಳೇ ಖುದ್ದು ಹೇಳಿದ್ರು, ರೆಡ್ಡಿಯವರೇ ನಿಮಗೆ ತೊಂದರೆ ಮಾಡಬೇಕೆಂದು ಮೇಲಿನವರ ಆದೇಶ ಇದೆ, ಆದರೆ ಬಳ್ಳಾರಿಯ ಜನರಿಗೆ ನಿಮ್ಮ ಬಗ್ಗೆ ಒಳ್ಳೆಯ ಅಭಿಪ್ರಾಯ ಇದೆ ಎಂದು ಹೇಳಿದರು.




