ಹಾವೇರಿ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯಲ್ಲಿ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಗಾಗಿ 13 ದಿನಗಳ “ಸಿಸಿ ಟಿ.ವಿ ಕ್ಯಾಮೆರಾ ಅಳವಡಿಕೆ” ಮತ್ತು ಸರ್ವಿಸಿಂಗ್ ಹಾಗೂ 30 ದಿನಗಳ ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ” ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ತರಬೇತಿಗಳು ಜುಲೈ ತಿಂಗಳಿನಲ್ಲಿ ಪ್ರಾರಂಭವಾಗಲಿದ್ದು, ತರಬೇತಿ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ಸೌಕರ್ಯ ಕಲ್ಪಿಸಲಾಗುವುದು. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಆಸಕ್ತರು ತಮ್ಮ ಹೆಸರು, ವಿಳಾಸವನ್ನು ನೋಂದಾಯಿಸಲು ಜೂನ್ 30 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ವಿಳಾಸಕ್ಕೆ ಹಾಗೂ ಸಂಸ್ಥೆಯ ದೂ. 9483485489, 9482188780, 7204609646, 8197022501, 08284-295307, 220807 ಗೆ ಸಂಪರ್ಕಿಸಲು ಕೋರಲಾಗಿದೆ.




