ಮುಂಬೈ : ಇಂದು ಸಂಜೆ 7.30ಕ್ಕೆ ಮಹಾರಾಷ್ಟ್ರದ ನೂತನ ಸಿಎಂ ಆಗಿ ಏಕನಾಥ್ ಶಿಂಧೆಯವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬುದಾಗಿ ಬಿಜೆಪಿ ಮುಖಂಡ ದೇವೇಂದ್ರ ಫಡ್ನವಿಸ್ ಘೋಷಿಸಿದ್ದಾರೆ.
ಇಂದು ರಾಜಭವನದಲ್ಲಿ ರಾಜ್ಯಪಾಲರ ಭೇಟಿಯ ಬಳಿಕ ಮಾತನಾಡಿದಂತ ಅವರು, ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಶಿವಸೇನೆಯ ಏಕನಾಥ್ ಶಿಂಧೆಯವರನ್ನು ಆಯ್ಕೆ ಮಾಡಲಾಗಿದೆ. ಅವರು ಇಂದು ಸಂಜೆ 7.30ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬುದಾಗಿ ಹೇಳಿದರು.
ಅಂದಹಾಗೇ, ನಿನ್ನೆ ಸುಪ್ರೀಂ ಕೋರ್ಟ್ ಇಂದು ವಿಶ್ವಾಸಮತಯಾಚನೆಗೆ ಸೂಚಿಸಿದ ಕಾರಣ, ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆಯವರು ರಾಜೀನಾಮೆ ನೀಡಿದ್ದರು. ಈ ಬೆನ್ನಲ್ಲೇ ಬಿಜೆಪಿಯಿಂದ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಚುರುಕಿನ ಪ್ರಕ್ರಿಯೆ ನೆಡೆದಿತ್ತು. ಇದೀಗ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಇಂದು ಸಂಜೆ 7.30ಕ್ಕೆ ಏಕನಾಥ್ ಶಿಂಧೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.




