ಇಂಗ್ಲೆಂಡ್ ವಿರುದ್ಧ 5ನೇ ಟೆಸ್ಟ್: ಜಸ್ಪ್ರೀತ್ ಬುಮ್ರಾ ನಾಯಕತ್ವ, ರಿಷಭ್ ಪಂತ್ ಉಪನಾಯಕ

ನವದೆಹಲಿ: ಪೂರ್ಣಾವಧಿ ನಾಯಕ ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯಕ್ಕೆ ಜಸ್ಪ್ರೀತ್ ಬುಮ್ರಾ ಅವರನ್ನು ಭಾರತದ ನಾಯಕನನ್ನಾಗಿ ನೇಮಿಸಲಾಗಿದೆ ಎಂದು ಅಖಿಲ ಭಾರತ ಹಿರಿಯರ ಆಯ್ಕೆ ಸಮಿತಿ ಶುಕ್ರವಾರ ಪ್ರಕಟಿಸಿದೆ. ಏತನ್ಮಧ್ಯೆ, ರಿಷಭ್ ಪಂತ್ ಅವರನ್ನು ಐದನೇ ಟೆಸ್ಟ್ಗೆ ಉಪನಾಯಕರನ್ನಾಗಿ ನೇಮಿಸಲಾಗಿದೆ.

ಲೀಸೆಸ್ಟರ್ಶೈರ್ ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ಕೋವಿಡ್ ಪಾಸಿಟಿವ್ ಬಂದ ರೋಹಿತ್ ಚೇತರಿಸಿಕೊಳ್ಳಲು ವಿಫಲರಾಗಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ. ವಿಶೇಷವೆಂದರೆ, ಕಳೆದ ವಾರ ಲೀಸೆಸ್ಟರ್ಶೈರ್ ವಿರುದ್ಧದ 4 ದಿನಗಳ ಅಭ್ಯಾಸ ಪಂದ್ಯದಲ್ಲಿ ರೋಹಿತ್ ಭಾರತವನ್ನು ಮುನ್ನಡೆಸಿದ್ದರು. ಭಾರತದ ನಾಯಕ ಮೊದಲ ಇನ್ನಿಂಗ್ಸ್ ನಲ್ಲಿ ಬ್ಯಾಟಿಂಗ್ ಮಾಡಿ 25 ರನ್ ಗಳಿಸಿದರು. ಆದರೆ ಅವರು 2 ನೇ ಇನ್ನಿಂಗ್ಸ್ ನಲ್ಲಿ ಮೈದಾನಕ್ಕೆ ಇಳಿಯದೇ ಇದ್ದದ್ದು, ಹಲವು ಅನುಮಾನಕ್ಕೆ ಕಾರಣವಾಗಿತ್ತು.

About The Author