ಬೆಂಗಳೂರು :ವಿದ್ಯಾರ್ಥಿಗಳನ್ನು ದೇಶದ ಆಸ್ತಿ ಯನ್ನಾಗಿ ರೂಪಿಸುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಕಮಲಾ ನಗರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಸರಕಾರಿ ಶಾಲೆಯಲ್ಲಿ ಪ್ರೌಢಶಾಲಾ ಮಕ್ಕಳ ಪೋಷಕರ ಸಭೆ ಮತ್ತು ಕಲಿಕಾ ಚೇತರಿಕೆ
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಕ್ಷರ ಕಲಿಸಿದ ಗುರುವಿಗೆ ಗೌರದ ಕೊಡುವುದನ್ನು ಪ್ರತಿಯೊಬ್ಬರೂ ಜೀವನದಲ್ಲಿ ಆಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ತಮ್ಮ ಮಕ್ಕಳು ಶಾಲೆ ಮತ್ತು ಮನೆಯಲ್ಲಿ ಏನು ಕಲಿಯುತ್ತಿದ್ದಾರೆ ಎನ್ನುವುದನ್ನು ಪೋಷಕರು ಗಮನಿಸುತ್ತಿರಬೇಕು. ಕೇವಲ ಶಾಲಾ ಶುಲ್ಕ ತುಂಬಿ,ಬಟ್ಟೆ ಕೊಡಿಸಿದರೆ ಸಾಲದು ಬದಲಿಗೆ ಶಾಲೆಗಳಲ್ಲಿ ನಡೆದ ಪಾಠ, ಪ್ರವಚನಗಳ ಬಗ್ಗೆ ಮಕ್ಕಳಿಂದ ಮಾಹಿತಿ ಪಡೆದುಕೊಳ್ಳಬೇಕು. ನೋಟ್ ಪುಸ್ತಕಗಳನ್ನು ಪರಿಶೀಲನೆ ನಡೆಸಬೇಕು. ಆಗ ಮಕ್ಕಳಿಗೂ ಪೋಷಕರ ಕಾಳಜಿ ಅರ್ಥ ವಾಗುತ್ತದೆ ಎಂದರು.
ಬಿಬಿಎಂಪಿ ಮಾಜಿ ಉಪಮೇಯರ್ ಹೇಮಲತಾ ಕೆ
ಗೋಪಾಲಯ್ಯ ಮಾತನಾಡಿ, ಈ ರೀತಿಯ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕಾದ ಅಗತ್ಯವಿದೆ. ಆಗ ಮಾತ್ರವೇ ಪೋಷಕರು ಕೂಡ ತಮ್ಮ ಜವಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸುವ ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಬಿಬಿಎಂಪಿ ಮಾಜಿ ಸದಸ್ಯೆ ಪದ್ಮಾವತಿ ಶ್ರೀನಿವಾಸ್, ಬಿಜೆಪಿ ಮುಖಂಡರಾದ ಜಯಸಿಂಹ, ವೆಂಕಟೇಶ್ ಮೂರ್ತಿ,ಶಿವಾನಂದ ಮೂರ್ತಿ, ವೆಂಕಟೇಶ್,ಬಿಇಒ ರಮೇಶ್ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.




