ಕಾನೂನು ಪದವೀಧರರಿಂದ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ತರಬೇತಿ ನೀಡಲು ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯು ಹಾವೇರಿ ಜಿಲ್ಲೆಯವರಾಗಿರಬೇಕು. ಪ್ರವರ್ಗ-1ರ ಅಭ್ಯರ್ಥಿಗಳು ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕಕ್ಕೆ 31 ವರ್ಷ ಹಾಗೂ ಇತರೆ ಪ್ರವರ್ಗಗಳ ಅಭ್ಯರ್ಥಿಗಳ ವಯಸ್ಸು 30 ವರ್ಷದೊಳಗಿರಬೇಕು.

ಪ್ರವರ್ಗ-1ರ ಅಭ್ಯರ್ಥಿಗಳ ವಾರ್ಷಿಕ ಆದಾಯ ರೂ.3.50 ಲಕ್ಷ ಹಾಗೂ ಪ್ರವರ್ಗ-2ಎ, 3ಎ,3ಬಿ ಅಭ್ಯರ್ಥಿಗಳ ವಾರ್ಷಿಕ ಆದಾಯ ರೂ.2.50 ಲಕ್ಷದೊಳಗಿರಬೇಕು. ಹಿಂದಿನ ಎರಡು ವರ್ಷದೊಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ನಾಲ್ಕು ವರ್ಷಗಳ ತರಬೇತಿ ನೀಡಲಾಗುವುದು. ಈ ಅವಧಿಯಲ್ಲಿ ರೂ.ನಾಲ್ಕು ಸಾವಿರ ತರಬೇತಿ ಭತ್ಯೆ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರಿ ವಕೀಲರು ಅಥವಾ ಕನಿಷ್ಠ 20 ವರ್ಷಗಳ ವಕೀಲ ವೃತ್ತಿಯಲ್ಲಿ ಅನುಭವವುಳ್ಳ ಯಾವುದೇ ವಕೀಲರ ಅಧೀನದಲ್ಲಿ ತರಬೇತಿಗೆ ನೀಯೋಜಿಸಲಾಗುವುದು.

ನಿಗಧಿತ ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಕಾನೂನು ಪದವಿ ಅಂಕಪಟ್ಟಿಗಳು, ಪಾಸಿಂಗ್ ಸರ್ಟಿಫಿಕೇಟ್, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಕರ್ನಾಟಕ ವಕೀಲರ ಪರಿಷತ್ತಿನಲ್ಲಿ (ಸ್ಟೇಟ್ ಬಾರ್ ಕೌನ್ಸಿಲ್) ನೋಂದಾಯಿತ ಪ್ರಮಾಣಪತ್ರ, ಜಿಲ್ಲಾ, ತಾಲೂಕು ವಕೀಲರಸಂಘದಲ್ಲಿ(ಬಾರ್ ಅಸೋಷಿಯೇಷನ್) ನೋಂದಾಯಿತ ಪ್ರಮಾಣ ಪತ್ರದೊಂದಿಗೆ ದಿನಾಂಕ 27-07-2022ರೊಳಗಾಗಿ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಭವನ, ಬಿ ಬ್ಲಾಕ್, ರೂಂ.ನಂ.26 ಹಾವೇರಿ ಈ ವಿಳಾಸಕ್ಕೆ ಸಲ್ಲಿಸಬೇಕು.

ಅಪೂರ್ಣ ಹಾಗೂ ಅವಧಿ ಮೀರಿಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಹಾವೇರಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (ದೂ.08375-249008) ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author