ಹಿಮಾಚಲಪ್ರದೇಶ: ಇಲ್ಲಿನ ಕುಲ್ಲು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಪಾತಕ್ಕೆ ಬಿದ್ದು ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವಂತ ಕುಲು ಡಿಸಿ, ಅಶುತೋಷ್ ಗರ್ಗ್ ಅವರು, ಶಾಲಾ ಬಸ್ ಕುಲ್ಲುವಿನಿಂದ ಸೈಂಜ್ ಕಣಿವೆಯ ನಿಯೋಲಿ-ಶಾನ್ಶೇರ್ ರಸ್ತೆಯಲ್ಲಿ ಸೈಂಜ್ ಗೆ ಹೋಗುತ್ತಿತ್ತು. ಸಾವಿನ ಸಂಖ್ಯೆ ಹೆಚ್ಚಾಗಬಹುದು. ರಕ್ಷಣಾ ಕಾರ್ಯ ಮುಂದುವರೆದಿದೆ ಎಂದಿದ್ದಾರೆ.
ಬೆಳಿಗ್ಗೆ 8 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಶಾಲಾ ಮಕ್ಕಳು ಸಹ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.



