Sunday, December 22, 2024

Latest Posts

ಬೆಳ್ಳಂಬೆಳಿಗ್ಗೆ ಜಮೀರ್ ಒಡೆತನದ ಮನೆ, ಕಚೇರಿ ಮೇಲೆ ಎಸಿಬಿ ದಾಳಿ

- Advertisement -

ಬೆಂಗಳೂರು: ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಒಡೆತನದ ಮನೆ, ಕಚೇರಿ ಮೇಲೆ ಬೆಳ್ಳಂಬೆಳಿಗ್ಗೆ ಎಸಿಬಿ ದಾಳಿ ನಡೆಸಿದೆ.

ಜಮೀರ್ ಖಾನ್ ಅವರಿಗೆ ಸೇರಿದ ರೈಲ್ವೆ ಕಂಟೋನ್‍ಮೆಂಟ್ ಬಳಿಯಿರುವ ಮನೆ, ಕಲಾಸಿಪಾಳ್ಯದಲ್ಲಿ ಇರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಸಿಲ್ವರ್ ಓಕ್ ಅಪಾರ್ಟ್‍ಮೆಂಟ್‍ನಲ್ಲಿರುವ ಫ್ಲಾಟ್, ಸದಾಶಿವನಗರದಲ್ಲಿರುವ ಗೆಸ್ಟ್‍ಹೌಸ್ ಮತ್ತು ಬನಶಂಕರಿಯಲ್ಲಿರುವ ಜಿ.ಕೆ ಅಸೋಸಿಯೇಟ್ಸ್ ಕಚೇರಿ ಮೇಲೆ 40 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆದು ತನಿಖೆಯನ್ನು ಆರಂಭಿಸಿದ್ದಾರೆ.

ಎಸಿಬಿ ಅಧಿಕಾರಿಗಳ ತಂಡ ಮಂಗಳವಾರ ಬೆಳಿಗ್ಗೆ ಜಮೀರ್ ಖಾನ್ ಅವರ ನಿವಾಸ ಸೇರಿದಂತೆ ಅವರಿಗೆ ಸೇರಿದ ಪ್ರಮುಖ ಐದು ಕಡೆಗಳಲ್ಲಿ ದಾಳಿ ನಡೆಸಿದ್ದು, ಸುಮಾರು 40 ಕ್ಕೂ ಹೆಚ್ಚು ಸದಸ್ಯರಿದ್ದ ಭ್ರಷ್ಟಾಚಾರ ನಿಗ್ರಹ ದಳ ತಂಡದ ಅಧಿಕಾರಿಗಳು ಜಮೀರ್ ಅಹ್ಮದ್ ಖಾನ್ ಅವರಿಗೆ ಬೆಳ್ಳಂಬೆಳಿಗ್ಗೆಯೇ ಆಘಾತ ನೀಡಿದ್ದಾರೆ.

ಜಾರಿ ನಿರ್ದೇಶನಾಲಯದ ವರದಿಯ ಆಧಾರದ ಮೇಲೆ ಭ್ರಷ್ಟಾಚಾರ ನಿಗ್ರಹದ ದಳದ ಅಧಿಕಾರಿಗಳು ಶಾಸಕ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಅಕ್ರಮ ಆಸ್ತಿ ಪ್ರಕರಣ ದಾಖಲಿಸಿಕೊಂಡಿದ್ದು, ಜಮೀರ್ ಖಾನ್ ಅವರಿಗೆ ಸೇರಿದ ಐದು ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

- Advertisement -

Latest Posts

Don't Miss