Friday, December 13, 2024

Latest Posts

ಸಿದ್ದರಾಮಯ್ಯ ಒಬ್ಬ ಔಟ್ ಡೇಟೆಡ್ ಹೀರೋ: ಮುನಿರತ್ನ

- Advertisement -

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒಬ್ಬ ಔಟ್ ಡೇಟೆಡ್ ಹೀರೋ ಎಂದು ಬಿಜೆಪಿ ಸಚಿವ ಮುನಿರತ್ನ ವ್ಯಂಗ್ಯವಾಡಿದ್ದಾರೆ.

 ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಚಾಲ್ತಿಯಲ್ಲಿ ಇದ್ದೇನೆ ಎಂದು ತೋರಿಸಿಕೊಳ್ಳಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಕಾಂಗ್ರೆಸ್ ಪಾರ್ಟಿಯಲ್ಲಿ ಈಗಾಗಲೇ ಗುಂಪುಗಾರಿಕೆ ಹೆಚ್ಚಾಗಿದೆ. ಸಿದ್ದರಾಮಯ್ಯ ಅವರನ್ನು ಮುಗಿಸಬೇಕು ಎಂದು ಒಂದು ಬಣ ಕಾಯುತ್ತಿದೆ. ಕಾಂಗ್ರೆಸ್‍ನಲ್ಲಿ ಅಧಿಕಾರದ ದಾಹ ಜನಸೇವೆಗೈಯುವ ಆಸೆ ಇಲ್ಲ. ಅವರು ಯಾವುದೇ ಕಾರ್ಯಕ್ರಮ ಮಾಡಿದರು ಏನು ಉಪಯೋಗವಿಲ್ಲ ಎಂದಿದ್ದಾರೆ.

ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಹುಟ್ಟುಹಬ್ಬದ ಕಾರ್ಯಕ್ರಮ ಇವತ್ತು. ಈ ಹಿನ್ನೆಲೆ ಬಿಜೆಪಿ ಕಚೇರಿಯಲ್ಲಿ ವೈದ್ಯಕೀಯ ಶಿಬಿರವನ್ನು ಏರ್ಪಡಿಸಿದ್ದೇವೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ನಮ್ಮ ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ದೇಶದ ಬಗ್ಗೆ ಯೋಚನೆ ಮಾಡುವ ಮಹಾನ್ ನಾಯಕರಾಗಿದ್ದರು. ಅಂತಹ ಮಹಾ ನಾಯಕರು ಮತ್ತೆ, ಮತ್ತೆ ನಮ್ಮ ದೇಶದಲ್ಲಿ ಹುಟ್ಟಿ ಬರಲಿ ಎಂದಿದ್ದಾರೆ.

- Advertisement -

Latest Posts

Don't Miss