ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿವಿಧ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ವತಿಯಿಂದ 2022-23 ನೇ ಸಾಲಿಗೆ ನೂತನ ಶಿಕ್ಷಣ ನೀತಿ ಪ್ರಕಾರ(ಎನ್‍ಇಪಿ) ವಿವಿಧ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ(ಯುಯುಸಿಎಂಎಸ್)ಮೂಲಕ ಆನ್‍ಲೈನ್ ಹಾಗೂ ನೇರವಾಗಿ ವಿಶ್ವವಿದ್ಯಾಲಯದ ಹೆಲ್ಪ್‍ಡೆಸ್ಕ್ ಮೂಲಕ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದು.

ಬಿ.ಪಿ.ಎ ಹಾನರ್ಸ್(ಬ್ಯಾಚುಲರ್ ಆಫ್ ಪರ್ಫಾಮಿಂಗ್ ಆಟ್ರ್ಸ್) ನಾಲ್ಕು ವರ್ಷಗಳ ಕೋರ್ಸ್, ಹೊಸ ಶಿಕ್ಷಣ ನೀತಿ ಮಾದರಿಯಲ್ಲಿ ಐಚ್ಚಿಕ ವಿಷಯಗಳು ನಾಟಕ, ಭರತನಾಟ್ಯ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಕರ್ನಾಟಕ ಶಾಸ್ತ್ರೀಯ ಸಂಗೀತ, ತಬಲಾ, ಮೃದಂಗ, ವೀಣಾ, ಪಿಟೀಲು, ಭಾಷಾ ಪತ್ರಿಕೆ ಕನ್ನಡ/ಐಚ್ಚಿಕ ಕನ್ನಡ/ಸಂಸ್ಕøತ ಮತ್ತು ಇಂಗ್ಲಿಷ್, ಅರ್ಹತೆ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ಎಂ.ಪಿ.ಎ ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಭರತನಾಟ್ಯ, ನಾಟಕ, ತಬಲ, ಮೃದಂಗ, ವೀಣೆ(ಯಾವುದೇ ವಿಷಯದಲ್ಲಿ ಪದವಿ ಹೊಂದಿರಬೇಕು ಮತ್ತು ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಮತ್ತು ವಿಶ್ವವಿದ್ಯಾಲಯದ ಮೌಖಿಕ ಪರೀಕ್ಷೆಯಲ್ಲಿ ಅರ್ಹತೆ ಹೊಂದುವುದು). ಡಿ.ಲಿಟ್ ಸಂಗೀತ, ನೃತ್ಯ, ನಾಟಕ ಹಾಗೂ ಪ್ರದರ್ಶಕ ಕಲೆಗಳಲ್ಲಿ ಅಧ್ಯಯನ ನಡೆಸಿ ಉನ್ನತ ಮಟ್ಟದ ಪರಿಣಿತಿ ಹೊಂದಿರಬೇಕು.

ಸರ್ಟಿಫಿಕೇಟ್ ಕೋರ್ಸ್(6 ತಿಂಗಳು): ಭಕ್ತಿ ಸಂಗೀತ, ಸುಗಮ ಸಂಗೀತ, ಜಾನಪದ ಸಂಗೀತ, ರಂಗ ಸಂಗೀತ, ಭರತನಾಟ್ಯ, ನಾಟಕ, ಹಾರ್ಮೋನಿಯಂ, ತಬಲ, ಯೋಗ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಯಕ್ಷಗಾನ, ಗಮಕ. ಪಿ.ಜಿ ಡಿಪ್ಲೊಮಾ 1 ವರ್ಷ ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಭರತನಾಟ್ಯ, ನಾಟಕ, ತಬಲ, ಮೃದಂಗ, ವೀಣೆ ಮತ್ತು ಯೋಗ(ಯಾವುದೇ ಪದವಿ ಅಥವಾ ತತ್ಸಮಾನ).

ಆಸಕ್ತರು ವಿಶ್ವವಿದ್ಯಾಲಯದ ವೆಬ್‍ಸೈಟ್ https://www.musicuniversity.ac.in ಇಲ್ಲಿ ಇರುವ ಯುಯುಸಿಎಂಎಸ್ ಲಿಂಕ್ https://uucms.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಇಮೇಲ್ musicuniversity.ac.in or registrar@musicuniversity.ac.in, ದೂರವಾಣಿ ಸಂಖ್ಯೆ : 0821-2402141, 9880761877 ಸಂಪರ್ಕಿಸಬಹುದು. ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳು ಸಾರ್ವಜನಿಕ ವಿದ್ಯಾರ್ಥಿ ನಿಲಯಗಳಲ್ಲಿ ವಸತಿ ಸೌಲಭ್ಯವನ್ನು ಪಡೆಯಬಹುದು ಎಂದು ಕುಲಸಚಿವರು ತಿಳಿಸಿದ್ದಾರೆ.

About The Author