“ಹೊಯ್ಸಳ” ಸೆಟ್ ಗೆ ಭೇಟಿ ನೀಡಿದ ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ.
ಡಾಲಿ ಧನಂಜಯ್ ಅಭಿನಯದ “ಹೊಯ್ಸಳ” ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ಬಿರುಸಿನಿಂದ ಸಾಗುತ್ತಿದೆ
. ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ ಅವರು “ಹೊಯ್ಸಳ” ಚಿತ್ರದ ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಈ ಸಂದರ್ಭದಲ್ಲಿ ನಾಯಕ ಡಾಲಿ ಧನಂಜಯ್, ನಾಯಕಿ ಅಮೃತಾ ಅಯ್ಯಂಗಾರ್, ನಿರ್ಮಾಪಕರಾದ ಕಾರ್ತಿಕ್ ಗೌಡ, ಯೋಗಿ ಜಿ ರಾಜ್, ನಿರ್ದೇಶಕ ವಿಜಯ್ ನಾಗೇಂದ್ರ, ಸಾಹಸ ನಿರ್ದೇಶಕ ದಿಲೀಪ್ ಸುಬ್ಬರಾಯಣ್ ಮುಂತಾದವರು ಉಪಸ್ಥಿತರಿದ್ದರು.
ಮಹಿಳಾ ಕ್ರಿಕೆಟ್ ನಲ್ಲಿ ವೇದ ಕೃಷ್ಣಮೂರ್ತಿ ಅವರು ತಮ್ಮದೇ ಆದ ಹೆಸರು ಮಾಡಿದ್ದಾರೆ. 2017 ರ ಮಹಿಳಾ ಕ್ರಿಕೆಟ್ ವಿಶ್ವಕಪ್ ನಲ್ಲಿ ಭಾರತ ತಂಡ ಫೈನಲ್ ತಲುಪಿತು. ಆ ತಂಡದಲ್ಲಿ ವೇದ ಕೃಷ್ಣಮೂರ್ತಿ ಸಹ ಇದ್ದರು.
ಡಾಲಿ ಧನಂಜಯ ಈ ಚಿತ್ರದಲ್ಲಿ ಗುರು ದೇವ್ ಹೊಯ್ಸಳ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ಅಜನೀಶ್ ಲೋಕನಾಥ್ ಆವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಇತ್ತೀಚೆಗೆ ನಾಯಕ ಧನಂಜಯ ಅವರ “ಹೊಯ್ಸಳ” ಚಿತ್ರದ ಫಸ್ಟ್ ಲುಕ್ ಸಹ ನಿರ್ಮಾಣ ಸಂಸ್ಥೆಯಾದ ಕೆ.ಆರ್.ಜಿ ಸ್ಟುಡಿಯೋಸ್ ನಿಂದ ಬಿಡುಗಡೆಯಾಗಿದೆ.
ಮೈಸೂರಿನ ಭಾಗದ ಚಿತ್ರೀಕರಣದಲ್ಲಿ ನಾಯಕ ಧನಂಜಯ, ನಾಯಕಿ ಅಮೃತ ಅಯ್ಯಂಗಾರ್, ಅಚ್ಯುತ್ ಕುಮಾರ್, ಪ್ರತಾಪ್ ನಾರಾಯಣ್, ನವೀನ್ ಶಂಕರ್, ಅವಿನಾಶ್ ಕೆ.ಜಿ.ಎಫ್, ರಾಘು ಶಿವಮೊಗ್ಗ ಮುಂತಾದ ಕಲಾವಿದರು ಭಾಗಿಯಾಗಿದ್ದಾರೆ. ಸಾಹಸ ನಿರ್ದೇಶಕರಾದ ದಿಲೀಪ್ ಸುಬ್ರಹ್ಮಣ್ಯ ಹಾಗೂ ಅರ್ಜುನ್ ಮಾಸ್ಟರ್ ಅವರ ಸಾಹಸ ಸಂಯೋಜನೆಯಲ್ಲಿ ಸಾಹಸ ಸನ್ನಿವೇಶಗಳ ಚಿತ್ರೀಕರಣ ನಡೆಯಲಿದೆ.