ಕೊಲಂಬೋ: ಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಬಿಕ್ಕಟ್ಟಿನ ನಡುವೆ ರಾಜೀನಾಮೆ ನೀಡಲು ಒಪ್ಪಿದ್ದಾರೆ. ಈ ಮೂಲಕ ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದು, ಕೊನೆಗೂ ಆರ್ಥಿಕ ಬಿಕ್ಕಟ್ಟಿನ ಹಿನ್ನಲೆಯಲ್ಲಿ ತಮ್ಮ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಸಂಸತ್ತಿನಲ್ಲಿ ಪಕ್ಷದ ನಾಯಕರ ಒತ್ತಾಯದ ಮೇರೆಗೆ ಶ್ರೀ ಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ರಾಜೀನಾಮೆ ನೀಡಲು ಒಪ್ಪಿಕೊಂಡಿದ್ದಾರೆ ಎಂದು ಅವರ ಕಚೇರಿಯನ್ನು ಉಲ್ಲೇಖಿಸಿ ಎಪಿ ವರದಿ ಮಾಡಿದೆ.
ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಶನಿವಾರ ತಮ್ಮ ರಾಜೀನಾಮೆಯನ್ನು ಘೋಷಿಸಿದ್ದು, ಸರ್ವಪಕ್ಷಗಳ ಸರ್ಕಾರ ಅಧಿಕಾರಕ್ಕೆ ಬರಲು ದಾರಿ ಮಾಡಿಕೊಟ್ಟಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವಂತ ಅವರು “ಎಲ್ಲಾ ನಾಗರಿಕರ ಸುರಕ್ಷತೆ ಸೇರಿದಂತೆ ಸರ್ಕಾರದ ಮುಂದುವರಿಕೆಯನ್ನು ಖಚಿತಪಡಿಸಿಕೊಳ್ಳಲು, ಸರ್ವಪಕ್ಷಗಳ ಸರ್ಕಾರಕ್ಕೆ ದಾರಿ ಮಾಡಿಕೊಡಲು ಇಂದು ಪಕ್ಷದ ನಾಯಕರ ಅತ್ಯುತ್ತಮ ಶಿಫಾರಸನ್ನು ನಾನು ಒಪ್ಪಿಕೊಳ್ಳುತ್ತೇನೆ. ಇದನ್ನು ಸುಗಮಗೊಳಿಸಲು ನಾನು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಅವರು ತಿಳಿಸಿದ್ದಾರೆ.




