ಚಿಕ್ಕಮಗಳೂರು: ಜಿಲ್ಲೆಯಲ್ಲಿ ಯಡಬಿಡದೇ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಜಿಲ್ಲೆಯ ಅನೇಕ ತಾಲೂಕಿನಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ಆರು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ಮತ್ತು ನಾಡಿದ್ದು ರಜೆಯನ್ನು ಘೋಷಿಸಲಾಗಿದೆ.
ಈ ಸಂಬಂಧ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು, ಎನ್ ಆರ್ ಪುರ, ಕೊಪ್ಪ, ಶೃಂಗೇರಿ, ಮೂಡಿಗೆರೆ ಮತ್ತು ಕಳಸ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ದಿನಾಂಕ 11-07-2022ರ ನಾಳೆ ಮತ್ತು ದಿನಾಂಕ 12-07-2022ರ ನಾಡಿದ್ದು ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.




