ರಾಜ್ಯದ ಈ ಜಿಲ್ಲೆಗಳಲ್ಲಿ ಜುಲೈ.15ರವರೆಗೆ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಈಗಾಗಲೇ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ನಾಳೆಯಿಂದ ಜುಲೈ.15ರವೆರೆಗ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಮಾಹಿತಿ ಬಿಡುಗಡೆ ಮಾಡಿರುವಂತ ಭಾರತೀಯ ಹವಾಮಾನ ಇಲಾಖೆಯು, ಜುಲೈ.11ರ ನಾಳೆ ಕೊಡಗು, ಶಿವಮೊಗ್ಗ, ಹಾಸನ ಹಾಗೂ ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗಲಿದೆ. ಮೈಸೂರು ಮತ್ತು ದಾವಣಗೆರೆ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ. ಜುಲೈ.12ರಂದು ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಜುಲೈ 13ರಂದು ಮೈಸೂರು, ಹಾಸನ, ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ. ಜುಲೈ.14ರಂದು ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಮತ್ತು ಮೈಸೂರಿನಲ್ಲಿ ಭಾರೀ ಮಳೆಯಗಾಲಿದೆ. ಜುಲೈ.15ರಂದು ಶಿವಮೊಗ್ಗ, ಮೈಸೂರು, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ.

About The Author