ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ವರುಣನ ಆರ್ಭಟ ಮುಂದುವರೆಯಲಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಬಗ್ಗೆ ಐಎಂಡಿ ಮಳೆ ಎಚ್ಚರಿಕೆ ನೀಡಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಮಲೆನಾಡು ಭಾಗದಲ್ಲಿ ಪ್ರತ್ಯೇಕವಾದ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಕರ್ನಾಟಕ ಜಿಲ್ಲೆಗಳಲ್ಲಿ ವ್ಯಾಪಕ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಇದಲ್ಲದೆ, ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ಮೈಸೂರು ಜಿಲ್ಲೆಗಳ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ.

ಇದಲ್ಲದೆ, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

About The Author